
ಶಿವರಾಜ್ ತಂಗಡಗಿ
ಕೊಪ್ಪಳ: ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.
ಮೃತರ ಕುಟುಂಬಸ್ಥರನ್ನು ಭೇಟಿಯಾದ ಶಿವರಾಜ್ ತಂಗಡಗಿ ಅವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪರಿಹಾರ ಘೋಷಣೆ ಮಾಡಿದ್ದೇನೆ. ಒಂದು ವಾರದೊಳಗೆ ಅವರಿಗೆ ಪರಿಹಾರ ನೀಡುತ್ತೇವೆ ಎಂದರು.
ಜಲ ಜೀವನ್ ಕಾಮಗಾರಿ ವೇಳೆ ಕೆಲ ಲೋಪಗಳಾಗಿದ್ದು ಇದರಿಂದಾಗಿ ಗ್ರಾಮದಲ್ಲಿ ನೀರು ಕಲುಷಿತವಾಗಿದೆ. ಹೀಗಾಗಿ ಈ ನೀರು ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ. ಮೃತರಿಗೆ ಒಂದು ವಾರದಲ್ಲಿ 2 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.
ಇದನ್ನೂ ಓದಿ: ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು: ಜಲ ಜೀವನ್ ಮಿಷನ್ ಪೈಪ್‌ಲೈನ್ ಕಾಮಗಾರಿಗೆ ಗ್ರಾಮಸ್ಥರ ಆರೋಪ
ಬಸರಿಹಾಳ್ ಗ್ರಾಮದ ಹೊನ್ನಮ್ಮ ಶಿವಪ್ಪ (65ವ) ಎಂಬ ವೃದ್ಧೆ ಹಾಗೂ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ 10 ವರ್ಷದ ನಿರ್ಮಲಾ ಈರಪ್ಪ ಮೃತಪಟ್ಟಿದ್ದರು.