ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್; ಸಿಬಿಐಗೆ ಹೈಕೋರ್ಟ್ ನೋಟಿಸ್

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. 

ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಕ್ರಮವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ಸಿಬಿಐ ತನಿಖೆಗೆ ಈ ಹಿಂದಿನ ಸರ್ಕಾರ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಡಿ.ಕೆ ಶಿವಕುಮಾರ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅಂದು ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಡಿಕೆ ಶಿವಕುಮಾರ್ ಅರ್ಜಿಯನ್ನು ವಜಾಗೊಳಿಸಿ, ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು.

ಇದರ ವಿರುದ್ಧ ಡಿಕೆ ಶಿವಕುಮಾರ್ ಹೈಕೋರ್ಟ್ ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಸಿಬಿಐಗೆ ನೋಟಿಸ್ ನೀಡಿದ್ದು ಜುಲೈ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com