ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ್ದಕ್ಕೆ ಆಕ್ರೋಶ: ಜೂನ್ 20ರಂದು ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ

'ಅನ್ನಭಾಗ್ಯ' ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು, ರಾಜಕೀಯ ದೇಷ ಸಾಧಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ಜೂನ್ 20ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಶುಕ್ರವಾರ ಹೇಳಿದೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: 'ಅನ್ನಭಾಗ್ಯ' ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು, ರಾಜಕೀಯ ದೇಷ ಸಾಧಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ಜೂನ್ 20ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಶುಕ್ರವಾರ ಹೇಳಿದೆ.

ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರದ ಉಚಿತ ಅಕ್ಕಿ ನೀಡುವ ಅನ್ನ ಯೋಜನೆಯನ್ನು ಹಾಳು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ  ರಾಜ್ಯಕ್ಕೆ ಅಕ್ಕಿ ಮಾರಾಟವನ್ನು ನಿಲ್ಲಿಸುತ್ತಿದೆ. ಜೂನ್ 20 ರಂದು ರಾಜ್ಯಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆಂದು ಹೇಳಿದರು.

ಜೂ.20ರಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕು' ಎಂದು ಇದೇ ವೇಳೆ ಕರೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com