ಕರ್ನಾಟಕ ಬಂದ್
ರಾಜ್ಯ
ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22ರಂದು ಕರ್ನಾಟಕ ಬಂದ್!
ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ.
ಬೆಂಗಳೂರು: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ.
ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.
ಆದರೆ ರಾಜ್ಯ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ವಿಫಲ ಹಿನ್ನಲೆ ಅನಿವಾರ್ಯವಾಗಿ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಬಂಧ್ ಗೆ ಕರೆ ನೀಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ