ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ಪರಿಹಾರ: ತಲಾ 25 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು.
Published: 19th June 2023 02:08 PM | Last Updated: 19th June 2023 07:45 PM | A+A A-

ಪರಿಹಾರ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು.
ಮಂಗಳೂರಿನಲ್ಲಿ 2018ರ ಜನವರಿ 3ರಂದು ಹತ್ಯೆಯಾಗಿದ್ದ ಕಾಟಿಪಳ್ಳದ ದೀಪಕ್ ರಾವ್ ಮತ್ತು ಬೆಳ್ಳಾರೆಯ ಮಸೂದ್,ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ , 2022 ಜನವರಿ 17 ರಂದು ಗದಗ ಜಿಲ್ಲೆ ನರಗುಂದದಲ್ಲಿ ಹತ್ಯೆಯಾಗಿದ್ದ ಸಮೀರ್, 2023 ಮಾರ್ಚ್ 31 ರಂದು ಮಂಡ್ಯದಲ್ಲಿ ಹತ್ಯೆಯಾಗಿದ್ದ ಇದ್ರಿಸ್ ಪಾಶ ಅವರ ಕುಟುಂಬ ಸದಸ್ಯರಿಗೂ ಪರಿಹಾರ ಚೆಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದರು.
ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಇಂದು ಮುಖ್ಯಮಂತ್ರಿ @siddaramaiah ಅವರು ವಿತರಿಸಿ ಮಾತನಾಡಿದರು.
— CM of Karnataka (@CMofKarnataka) June 19, 2023
1/3#ಸರ್ವರಿಗೂಸಮಪಾಲು pic.twitter.com/rI61n9daFQ
ಇದನ್ನೂ ಓದಿ: ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ!
ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿರುವುದಾಗಿ ತಿಳಿಸಿದರು. ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ಮತ್ತಿತರ ನಾಯಕರು ಉಪಸ್ಥಿತರಿದ್ದರು.