ಗೃಹಜ್ಯೋತಿ ಯೋಜನೆ ನೋಂದಣಿಗೆ ಭರ್ಜರಿ ಪ್ರತಿಕ್ರಿಯೆ; ಮೊದಲ ದಿನ 55,000 ಗ್ರಾಹಕರಿಂದ ಅರ್ಜಿ!
200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಪಡೆಯಲು ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನ 55 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ.
Published: 19th June 2023 01:23 AM | Last Updated: 19th June 2023 07:29 PM | A+A A-

ಗೃಹ ಜ್ಯೋತಿ
ಬೆಂಗಳೂರು: 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಪಡೆಯಲು ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನ 55 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ.
ಸೇವಾ ಸಿಂಧು ಪೋರ್ಟಲ್ (https://sevasindhugs.karnataka.gov.in) ಮೂಲಕ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ತಮ್ಮ ಗ್ರಾಹಕ ಐಡಿಯನ್ನು ವೆಬ್ ಪೋರ್ಟಲ್ ನಲ್ಲಿ ನಮೂದಿಸಬೇಕಾಗಿದ್ದು, ಜೊತೆಗೆ ಆಧಾರ್ ನಂಬರ್ ಹಾಗೂ ಮೊಬೈಲ್ ನಂಬರ್ ನ್ನು ದಾಖಲಿಸಬೇಕಾಗುತ್ತದೆ.
ಇದನ್ನೂ ಓದಿ: ವಿದ್ಯುತ್ ದರ ಹೆಚ್ಚಳವನ್ನು ಮುಂದೂಡುವಂತೆ ಇಂಧನ ಸಚಿವರಿಗೆ ಪತ್ರ ಬರೆದ ಬೆಂಗಳೂರಿನ ಹೋಟೆಲ್ ಮಾಲೀಕರು
ಬೆಂಗಳೂರು ಒನ್ ಕೇಂದ್ರ, ಗ್ರಾಮ ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಮೊದಲ ದಿನವೇ ಗ್ರಾಹಕರಿಂದ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಭಾನುವಾರದ ಹೊರತಾಗಿಯೂ ಎಲ್ಲಾ ಎಸ್ಕಾಮ್ ಗಳ ಅಧಿಕಾರಿಗಳೂ ನೋಂದಣಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ವಿದ್ಯುತ್ ದರ ಏರಿಕೆ ಹಿಂಪಡೆಯಲು ಸಾಧ್ಯವಿಲ್ಲ: ಸಚಿವ ಕೆಜೆ ಜಾರ್ಜ್
ಮೊಬೈಲ್, ಲ್ಯಾಪ್ ಟಾಪ್ ಅಥವಾ ಇಂಟರ್ ನೆಟ್ ಕೆಫೆಗಳ ಮೂಲಕವೂ ನೋಂದಣಿ ಮಾಡಬಹುದಾಗಿದ್ದು, ಹೆಚ್ಚಿನ ದಾಖಲೆಗಳ ಅಗತ್ಯವಿರುವುದಿಲ್ಲ ಎಂದು ಸರ್ಕಾರ ತಿಳಿಸಿದೆ.