ಬೀದರ್‌ನಲ್ಲಿ ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಕುಲುಷಿತ ನೀರು ಸೇವನೆ ಪ್ರಕರಣ
ಕುಲುಷಿತ ನೀರು ಸೇವನೆ ಪ್ರಕರಣ

ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. 

ಕುಡಿಯುವ ನೀರಿನ ಬಾವಿಗೆ ಚರಂಡಿ ನೀರು ಸೇರಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ 18 ಜನರ ಪೈಕಿ 6 ಮಂದಿ ಮಕ್ಕಳು ಸೇರಿದ್ದು ಅವರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಇನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಕರಿಕ್ಯಾಳ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com