ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 1 ದಿನ ಮೊಟ್ಟೆ, ಬಾಳೆಹಣ್ಣು ವಿತರಿಸಲು ಸರ್ಕಾರ ಆದೇಶ
ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರವು 1 ರಿಂದ 8 ನೇ ತರಗತಿಯವರೆಗೆ ಓದುತ್ತಿರುವ ಶಾಲಾ ಮಕ್ಕಳಿಗೆ ವಾರದಲ್ಲಿ 1 ದಿನ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಬುಧವಾರ ಆದೇಶ ಹೊರಡಿಸಿದೆ.
Published: 21st June 2023 03:41 PM | Last Updated: 21st June 2023 07:02 PM | A+A A-

ಮೊಟ್ಟೆ - ಬಾಳೆಹಣ್ಣು
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರವು 1 ರಿಂದ 8 ನೇ ತರಗತಿಯವರೆಗೆ ಓದುತ್ತಿರುವ ಶಾಲಾ ಮಕ್ಕಳಿಗೆ ವಾರದಲ್ಲಿ 1 ದಿನ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಬುಧವಾರ ಆದೇಶ ಹೊರಡಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಶುಭ ಕಲ್ಯಾಣ್ ಸುತ್ತೋಲೆ ಬಿಡುಗಡೆ ಮಾಡಿದ್ದು, ರಾಜ್ಯಾದ್ಯಂತ ಇರುವ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಸಿಬ್ಬಂದಿಗೆ ಬೇಯಿಸಿದ ಮೊಟ್ಟೆಯನ್ನು ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಪೂರಕವಾಗಿ ನೀಡುವಂತೆ ಸೂಚಿಸಿದ್ದಾರೆ. ಮೊಟ್ಟೆ ತಿನ್ನದಿರುವವರಿಗೆ ಬಾಳೆಹಣ್ಣು ಅಥವಾ ಚಿಕ್ಕಿ (ಕಡಲೆಕಾಯಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ಖಾದ್ಯ) ನೀಡುವಂತೆ ತಿಳಿಸಿದ್ದಾರೆ.
ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ಹೋಗಲಾಡಿಸಲು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕಗಳನ್ನು ನೀಡಲಾಗುವುದು. ಜುಲೈ 15ರವಗೆ ಮೊದಲ ಹಂತದಲ್ಲಿ ವಾರಕ್ಕೊಮ್ಮೆ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲು ಸರ್ಕಾರ ಮುಂದಾಗಿದೆ.
ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ಪ್ರತಿಯೊಂದಕ್ಕೂ 8 ರೂ. ನೀಡಿ ಖರೀದಿಸಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.
ಈ ಹಿಂದೆ ಕರ್ನಾಟಕ ಸರ್ಕಾರದ ಈ ನಿರ್ಧಾರ ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಈ ನಿರ್ಧಾರವು ಸಮಾಜದ ಒಂದು ವರ್ಗವನ್ನು ಕೆರಳಿಸಿತು. ಇದು ಶಾಲೆಗೆ ಹೋಗುವ ಮಕ್ಕಳಲ್ಲಿ ತಾರತಮ್ಯ ಉಂಟುಮಾಡುವ ಕಾರಣ ಶಾಲಾ ಆವರಣದಲ್ಲಿ ಮೊಟ್ಟೆಗಳನ್ನು ವಿತರಿಸಬಾರದು ಎಂದು ಒತ್ತಾಯಿಸಿದರು. ಮತ್ತೊಂದು ವಿಭಾಗವು ಈ ಯೋಜನೆಯನ್ನು ನಿಲ್ಲಿಸಬಾರದು ಎಂದು ಪ್ರತಿಪಾದಿಸಿದೆ.
ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಹೊಸ ಮೆನು ಸಿದ್ಧ: ಮಂಗಳೂರು ಬನ್ಸ್, ಬ್ರೆಡ್ ಜಾಮ್, ರಾಗಿ ಮುದ್ದೆ ಸೇರ್ಪಡೆ?
ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರವು ಧಾರ್ಮಿಕ ಗುಂಪುಗಳ ಒತ್ತಡಕ್ಕೆ ಮಣಿದು 2007ರಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವ ಯೋಜನೆಯನ್ನು ಎಚ್.ಡಿ. ಕುಮಾರಸ್ವಾಮಿ ಹಿಂದಕ್ಕೆ ಪಡೆದಿದ್ದರು. ಆದರೆ, ಹಿಂದಿನ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿತ್ತು.
ಆಗಿನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ಯೋಜನೆಗೆ ಜನರ ವಿರೋಧ ಮತ್ತು ಭರವಸೆಗಳ ನಡುವೆಯೇ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿಕೆ ನೀಡಿದ್ದರು. 'ಮೊಟ್ಟೆಗೆ ಪರ್ಯಾಯವಿಲ್ಲ. ಸೋಯಾಬೀನ್ ಇದೆ. ಆದರೆ, ಮಕ್ಕಳು ಅದನ್ನು ತಿನ್ನುವುದಿಲ್ಲ. ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ' ಎಂದು ಅವರು ಹೇಳಿದ್ದಾರೆ.