ಗೃಹ ಜ್ಯೋತಿಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ: ಕೈಗಾರಿಕೋದ್ಯಮಿಗಳಿಗೆ ಸಿಎಂ ಸಿದ್ದರಾಮಯ್ಯ ಮನವರಿಕೆ

ಗೃಹ ಜ್ಯೋತಿ ಯೋಜನೆಗೂ , ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ರಾಜ್ಯದ ಕೈಗಾರಿಕೋದ್ಯಮಿಗಳು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಗೃಹಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎಂದು ಶುದ್ಧ ಸುಳ್ಳು, ಇದೊಂದು ತಪ್ಪು ಅಭಿಪ್ರಾಯ ಎಂದರು. 
ಕೈಗಾರಿಕೋದ್ಯಮಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಕೈಗಾರಿಕೋದ್ಯಮಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ಗೃಹ ಜ್ಯೋತಿ ಯೋಜನೆಗೂ , ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ರಾಜ್ಯದ ಕೈಗಾರಿಕೋದ್ಯಮಿಗಳು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಗೃಹಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎಂದು ಶುದ್ಧ ಸುಳ್ಳು, ಇದೊಂದು ತಪ್ಪು ಅಭಿಪ್ರಾಯ ಎಂದರು. 

ಗೃಹಜ್ಯೋತಿ ಯೋಜನೆಯ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಿಲ್ಲ ಎಂಬುದನ್ನು ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡಿದ ಮುಖ್ಯಮಂತ್ರಿ, ಉದ್ಯಮಗಳ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಸುವ ತೀರ್ಮಾನ ಮಾಡಿಲ್ಲ. ಕೆಇಆರ್ ಸಿ ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು ಎಂದರು.

ವಿದ್ಯುತ್ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ಹೊಡೆತ ಬೀಳುತ್ತದೆ. ವಿದ್ಯುತ್ ದರವನ್ನು ಶೇ.9 ರಿಂದ 3ಕ್ಕೆ ಇಳಿಸಬೇಕು ಎಂದು ಉದ್ಯಮಿಗಳು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಆರ್ಥಿಕ, ಇಂಧನ ಇಲಾಖೆ, ಖಾಸಿಯಾ ಹಾಗೂ ಎಫ್ ಕೆಸಿಸಿಐ ಪ್ರತಿನಿಧಿಗಳ ಸಭೆ ಕರೆದು ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com