ಕೆಂಪೇಗೌಡ ಜಯಂತಿಗೆ ಸರ್ಕಾರ ಭರ್ಜರಿ ಸಿದ್ಧತೆ: ವಾರ್ಡ್‌ಗೆ ಒಬ್ಬರಂತೆ 198 ಮಂದಿ ಪ್ರಶಸ್ತಿಗೆ ಆಯ್ಕೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜೂನ್. 28 ರಿಂದ ಜುಲೈ 5 ರವರೆಗೆ ಕ್ಷೇತ್ರವಾರು ಕೆಂಪೇಗೌಡ ಜಯಂತಿ ಆಚರಿಸಲು ನಿರ್ಧರಿಸಿದ್ದು, ಈ ಸಂಬಂಧ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಇದರಂತೆ ಗುರುವಾರ ಮಹತ್ವದ ಸಭೆಯೊಂದನ್ನು ನಡೆಸಿದೆ.
ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಕುರಿತು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಸುತ್ತಿರುವ ಡಿಕೆ.ಶಿವಕುಮಾರ್.
ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಕುರಿತು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಸುತ್ತಿರುವ ಡಿಕೆ.ಶಿವಕುಮಾರ್.
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜೂನ್. 28 ರಿಂದ ಜುಲೈ 5 ರವರೆಗೆ ಕ್ಷೇತ್ರವಾರು ಕೆಂಪೇಗೌಡ ಜಯಂತಿ ಆಚರಿಸಲು ನಿರ್ಧರಿಸಿದ್ದು, ಈ ಸಂಬಂಧ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಇದರಂತೆ ಗುರುವಾರ ಮಹತ್ವದ ಸಭೆಯೊಂದನ್ನು ನಡೆಸಿದೆ.

ಬೆಂಗಳೂರು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಡಿಸಿಎಂ & ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಿನ್ನೆ ಪೂರ್ವಭಾವಿ ಸಭೆ ನಡೆಯಿತು.

ಬಿಬಿಎಂಪಿ ವತಿಯಿಂದ ನಡೆಯಲಿರುವ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಕೆಂಪೇಗೌಡ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಸಂಬಂಧ ಸಮಿತಿ ರಚಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದರಂತೆ ಪ್ರತಿ ವಾರ್ಡ್‌ಗೆ ಒಂದರಂತೆ 198 ಮಂದಿ ಆಯ್ಕೆ ಮಾಡಲಾಗುತ್ತದೆ, ಎಲ್ಲಾ ಜಾತಿ ಧರ್ಮಕ್ಕೂ ಪ್ರಶಸ್ತಿ ಸಿಗಬೇಕು. ತಾರತಮ್ಯ ಮಾಡುವಂತಿಲ್ಲ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಬೇಕು. ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಪ್ರಶಸ್ತಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಚರ್ಚಿಸಲಾಗುವುದು ಎಂಬ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಸಭೆಯ ಪ್ರಮುಖ ಅಂಶಗಳು ಇಂತಿವೆ...

  • ಹಾಸನದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಸಲು ಸಿದ್ಧತೆ
  • ಕರ್ನಾಟಕದ ಎಲ್ಲಾ ತಾಲೂಕುಗಳಲ್ಲೂ ಕಡ್ಡಾಯ ಆಚರಣೆ.
  • ಬಿಬಿಎಂಪಿ ವತಿಯಿಂದ ಬೆಂಗಳೂರಲ್ಲಿ ಕೆಂಪೇಗೌಡರ ಜಯಂತಿ.
  • ಬೆಂಗಳೂರಿನ ಪ್ರತಿ ವಾರ್ಡ್‌ಗೆ ಒಂದರಂತೆ 198 ಜನರಿಗೆ ಪ್ರಶಸ್ತಿ.
  • ಬೆಂಗಳೂರು ನಗರದಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಆಚರಣೆ
  • ಶಾಸಕರ ಅನುಕೂಲಕ್ಕೆ ತಕ್ಕಂತೆ ಜೂ. 28ರಿಂದ ಜು. 5ರವರೆಗೆ ವೇಳಾಪಟ್ಟಿ
  • ಬೆಂಗಳೂರಿನ ವಲಯ ಜಂಟಿ ಆಯುಕ್ತರು ವೇಳಾಪಟ್ಟಿ ಸಿದ್ದಪಡಿಸಬೇಕು
  • 5 ಗೋಪುರಗಳಿಂದ ಜ್ಯೋತಿ ಬರಲಿದ್ದು, ಸಚಿವರಿಂದ ಚಾಲನೆ ಸಿಗಲಿದೆ.
  • ಆಹ್ವಾನ ಪತ್ರಿಕೆಯಲ್ಲಿ ಶಿಷ್ಠಾಚಾರದ ಪ್ರಕಾರ ಎಲ್ಲಾ ಮಾಹಿತಿ ಹಾಕಬೇಕು.

ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ರಾಮಲಿಂಗಾರೆಡ್ಡಿ, ಮಾಗಡಿ ಶಾಸಕ ಬಾಲಕೃಷ್ಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ಕನ್ನಡ & ಸಂಸ್ಕೃತಿ ಇಲಾಖೆ ಕಾರ್ಯದರ್ ಮಂಜುಳಾ, ರಾಜೇಂದ್ರ ಕುಮಾರ್ ಕಠಾರಿಯಾ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com