ಗೃಹ ಜ್ಯೋತಿ ಯೋಜನೆ: ಸರ್ವರ್ ಸಮಸ್ಯೆ ನಡುವೆಯೂ 6 ದಿನದಲ್ಲಿ 20 ಲಕ್ಷ ಗ್ರಾಹಕರ ನೋಂದಣಿ!

ಸರ್ವರ್‌ ಸಮಸ್ಯೆ ನಡುವೆಯೂ ಗೃಹ ಜ್ಯೋತಿ ಯೋಜನೆಗೆ ಬುಧವಾರದವರೆಗೆ 20 ಲಕ್ಷಕ್ಕೂ ಹೆಚ್ಚು ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.
ಗೃಹಜ್ಯೋತಿ ಯೋಜನೆ
ಗೃಹಜ್ಯೋತಿ ಯೋಜನೆ
Updated on

ಬೆಂಗಳೂರು: ಸರ್ವರ್‌ ಸಮಸ್ಯೆ ನಡುವೆಯೂ ಗೃಹ ಜ್ಯೋತಿ ಯೋಜನೆಗೆ ಬುಧವಾರದವರೆಗೆ 20 ಲಕ್ಷಕ್ಕೂ ಹೆಚ್ಚು ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಫಲಾನುಭವಿಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯ ನೋಂದಣಿಯನ್ನು ಜೂನ್ 18 ರಂದು ಏಕಕಾಲದಲ್ಲಿ ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ರಾಜ್ಯಾದ್ಯಂತ ಗ್ರಾಮ ಒಂದರಲ್ಲಿ ತೆರೆಯಲಾಗಿದೆ.

ದಿನದಿಂದ ದಿನಕ್ಕೆ ನೋಂದಣಿ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದು ಬುಧವಾರ ಸಂಜೆ 7 ಗಂಟೆಯವರೆಗೆ 5.89 ಲಕ್ಷ ಜನರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.  ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಸೇವಾ ಸಿಂಧು' ಪೋರ್ಟಲ್‌ ಜತೆಗೆ, ಇಂಟರ್ನೆಟ್‌ ಕೇಂದ್ರಗಳಲ್ಲೂ ನೋಂದಣಿ ಮಾಡಬಹುದಾಗಿದೆ. ಕರ್ನಾಟಕ ಒನ್‌, ಬೆಂಗಳೂರು ಒನ್‌ ಹಾಗೂ ಗ್ರಾಮ ಒನ್‌ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದ್ದು, ಕೆಲ ತಾಂತ್ರಿಕ ಸಮಸ್ಯೆ ಸರಿಪಡಿಸಲಾಗಿದೆ. ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವು ನಿಗದಿಪಡಿಸದ ಕಾರಣ ಗ್ರಾಹಕರು ಆತಂಕ ಪಡದೇ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

ನೋಂದಣಿಗೆ ಯಾವುದೇ ಗಡುವು ಇಲ್ಲ ಮತ್ತು ಜನರು ಭಯಪಡುವ ಅಗತ್ಯವಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ (https://sevasindhugs.karnataka.gov.in) ಲಾಗ್ ಇನ್ ಮಾಡಲು ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com