ಉಚಿತ ವಿದ್ಯುತ್‌: ಗೃಹಜ್ಯೋತಿ ಯೋಜನೆಗೆ ಇಂದು 11,17,208 ಗ್ರಾಹಕರು ನೋಂದಣಿ

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 11,17,208 ಗ್ರಾಹಕರು...
ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಲು ಬೆಂಗಳೂರು ಒನ್ ಕೇಂದ್ರದಲ್ಲಿ ಸೇರಿರುವ ಜನ
ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಲು ಬೆಂಗಳೂರು ಒನ್ ಕೇಂದ್ರದಲ್ಲಿ ಸೇರಿರುವ ಜನ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 11,17,208 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. 

ಸರ್ವರ್‌ ಸಮಸ್ಯೆ ನಡುವೆಯೂ ಗೃಹ ಜ್ಯೋತಿ ಯೋಜನೆಗೆ ಕಳೆದ ಆರು ದಿನಗಳಲ್ಲಿ ಒಟ್ಟು 45.61 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಗೃಹ ಜ್ಯೋತಿ ನೋಂದಣಿಯು ಇನ್ನಷ್ಟು ವೇಗ ಪಡೆದುಕೊಂಡಿದ್ದು, ಶನಿವಾರ ಸಂಜೆ 8 ಗಂಟೆವರೆಗೆ 45,61,662 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವಿದ್ಯುತ್ ಇಲಾಖೆ ತಿಳಿಸಿದೆ.

ಇ-ಆಡಳಿತ ಇಲಾಖೆ ಪ್ರತ್ಯೇಕ ನೋಂದಣಿ ಲಿಂಕ್ ಅನ್ನು ರಾಜ್ಯದ 2,000 ವಿದ್ಯುಚ್ಛಕ್ತಿ ಕಚೇರಿಗಳಿಗೆ ನೀಡಿದ ನಂತರ ನೋಂದಣಿ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಶುಕ್ರವಾರ(ಜೂನ್ 23) 10,93,606 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು. ಶನಿವಾರ(ಜೂನ್ 24) ಸಂಜೆ 8 ಗಂಟೆಯವರೆಗೆ 11,17,208 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com