ಪತ್ನಿಯೊಂದಿಗೆ ಅಕ್ರಮ ಸಂಬಂಧ: ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಪತಿರಾಯ!

ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಕೋಲಾರದಲ್ಲಿ ನಡೆದಿದೆ.
ಕತ್ತು ಸೀಳಿದ ವ್ಯಕ್ತಿ
ಕತ್ತು ಸೀಳಿದ ವ್ಯಕ್ತಿ

ಕೋಲಾರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಚಿಂತಾಮಣಿಯ ಗಾಂಧಿನಗರದ ವಿಜಯ್ ಎಂಬಾತ ಚೇಳೂರು ತಾಲ್ಲೂಕಿನ ಮಂಡಪಲ್ಲಿಯ ಮಾರೇಶ್ ಎಂಬುವವರ ಕತ್ತನ್ನು ಕೊಯ್ದು ರಕ್ತ ಕುಡಿದ್ದಾನೆ. ಕೃತ್ಯವನ್ನು ವಿಜಯ್ ವಿಡಿಯೊ ಮಾಡಿಸಿದ್ದಾನೆ. 

ವಿಜಯ್ ಮತ್ತು ಮಾರೇಶ್ ಸ್ನೇಹಿತರಾಗಿದ್ದು ಬಟ್ಟೆ ವ್ಯಾಪಾರ ಮಾಡುತಿದ್ದರು. ನಾಲ್ಕು ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು, ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್​ ಹಲ್ಲೆಗೊಳಗಾದ ವ್ಯಕ್ತಿ. ವಿಜಯ್ ಪತ್ನಿ ಮಾಲಾ ಜೊತೆ ಮಾರೇಶ್​ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ವಿಜಯ್ ಮಾರೇಶ್​​​ನನ್ನು ​​ಸಿದ್ದೇಪಲ್ಲಿ ಕ್ರಾಸ್ ಬಳಿ ಕರೆಸಿಕೊಂಡು ಚಾಕುವಿನಿಂದ ಕತ್ತು ಸೀಳಿ ರಕ್ತ ಕುಡಿದಿದ್ದಾನೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಸದ್ಯ ಈ ಭೀಭತ್ಸ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರೋಪಿ ವಿಜಯ್​ನನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮಾರೇಶ್ ಚಿಕಿತ್ಸೆ ಪಡೆದು ಮನೆಗೆ ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com