ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಪಾದಚಾರಿ ಬಲಿ

ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಪಾದಚಾರಿಯೊಬ್ಬರು ಬಲಿಯಾದ ದಾರುಣ ಘಟನೆ ನವರಂಗ್ ಸಿಗ್ನಲ್​ ಬಳಿ ಭಾನುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಪಾದಚಾರಿಯೊಬ್ಬರು ಬಲಿಯಾದ ದಾರುಣ ಘಟನೆ ನವರಂಗ್ ಸಿಗ್ನಲ್​ ಬಳಿ ಭಾನುವಾರ ನಡೆದಿದೆ.

ಮೃತ ಪಾದಚಾರಿಯನ್ನು ಕೃಷ್ಣಪ್ಪ(55) ಎಂದು ಗುರುತಿಸಲಾಗಿದೆ. ಯು ಟರ್ನ್​ ತೆಗೆದುಕೊಳ್ಳುವಾಗ ಕಾರೊಂದು ಕೃಷ್ಣಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದು, ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ.

ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ಕೃಷ್ಣಪ್ಪ ತಲೆಗೆ ಬಲವಾದ ಪೆಟ್ಟುಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜಾಜಿನಗರ ಸಂಚಾರಿ ಪೊಲೀಸರು, ಪರಾರಿಯಾಗಿದ್ದ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com