ಕ್ಷುಲ್ಲಕ ಕಾರಣಕ್ಕೆ ಜಗಳ: ಸ್ನೇಹಿತರಿಂದಲೇ ಯುವಕನ ಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಸ್ನೇಹಿತರೇ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಭೀಕರ ಘಟನೆ ನಗರದ ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಸ್ನೇಹಿತರೇ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಭೀಕರ ಘಟನೆ ನಗರದ ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ನಡೆದಿದೆ.

ನೇಪಾಳ ಮೂಲದ ಡೇವಿಡ್(20) ಮೃತ ಯುವಕ. ಹರಳೂರಿನಲ್ಲಿ ಸಹೋದರನೊಂದಿಗೆ ವಾಸವಿದ್ದ ಡೇವಿಡ್, ಹೋಟೆಲ್‌ನಲ್ಲಿ ಅಡುಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ.

ಶನಿವಾರ ರಾತ್ರಿ ಕಸವನಹಳ್ಳಿಯ ಬೇಕರಿಯೊಂದರ ಬಳಿ ನಿಂತಿದ್ದಾಗ ಡೇವಿಡ್ ಮೇಲೆ ಚೂರಿಯಿಂದ ದಾಳಿ ನಡೆಸಲಾಗಿದೆ. ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಷ್ಟರಲ್ಲಾಗಲೇ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಡೇವಿಡ್ ಸ್ನೇಹಿತರೊಂದಿಗೆ ಜಗಳವಾಡಿದ್ದ. ಒಬ್ಬಾತನ ಮೇಲೆ ಹಲ್ಲೆಯನ್ನು ನಡೆಸಿದ್ದ. ಘಟನೆ ಬಳಿಕ ಡೇವಿಡ್ ಮೇಲೆ ಕೆಂಡಾಮಂಡಲಗೊಂಡಿದ್ದ ಸ್ನೇಹಿತರು ಹತ್ಯೆ ನಡೆಸಲು ಸಂಚು ರೂಪಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಘಟನೆ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com