ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ, ದಾಖಲೆಗಳಿದ್ದರೆ ಒದಗಿಸಲಿ: ರಾಮಲಿಂಗಾ ರೆಡ್ಡಿ

ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಪವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ನಿರಾಕರಿಸಿದ್ದಾರೆ.
ಸಚಿವ ರಾಮಲಿಂಗಾ ರೆಡ್ಡಿ
ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಪವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ನಿರಾಕರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು ಹಿಂದಿನ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ನಾವು ಆರೋಪ ಮಾಡಿ, ನಾವು ಭ್ರಷ್ಟಾಚಾರ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ನಮ್ಮ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಮಾತ್ರ ಮಣೆ ಹಾಕುತ್ತೇವೆ. ಕುಮಾರಸ್ವಾಮಿಯವರ ಬಳಿ ದಾಖಲೆಗಳಿದ್ದರೆ ನೀಡಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಈ ತಿಂಗಳ ವೇತನಕ್ಕೆ ಸಾರಿಗೆ ನಿಗಮದಲ್ಲಿ ಹಣಕಾಸು ಕೊರತೆ ವಿಚಾರವಾಗಿ ಮಾತನಾಡಿ, ಸರ್ಕಾರ ನಮಗೆ ಮಹಿಳಾ ಪ್ರಯಾಣಿಕರು ಎಷ್ಟು ಸಂಖ್ಯೆಯಲ್ಲಿ ಪ್ರಯಾಣ ಮಾಡಿದ್ದಾರೆ. ಅದರ ವೆಚ್ಚದ ಮಾಹಿತಿ ನೀಡಿಲಿದೆ‌. ಈ ನಿಟ್ಟಿನಲ್ಲಿ ವೇತನ ಸಮಸ್ಯೆ ಆಗುವುದಿಲ್ಲ. ಊಹೆ ಮಾಡಿಕೊಂಡು ಹೇಳಿದ್ದಕ್ಕೆ ಉತ್ತರ ಕೊಡಲು ಆಗಲ್ಲ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com