ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ತೀರ್ಥ ಕ್ಷೇತ್ರಗಳಿಗೆ ತೆರಳಿದ್ದ ಕಲಬುರಗಿ ಜಿಲ್ಲೆಯ 6 ಜನರು ಸಾವು

ದಕ್ಷಿಣ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಸಿಮೆಂಟ್ ಮಿಕ್ಸರ್ ಟ್ರಕ್‌ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಪಂಡರಪುರ ಮತ್ತು ಅಕ್ಕಲಕೋಟ್ ದೇವಾಲಯಗಳಿಗೆ ಭೇಟಿ ನೀಡಿ ಕರ್ನಾಟಕಕ್ಕೆ ಹಿಂದಿರುಗುತ್ತಿದ್ದ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸೊಲ್ಲಾಪುರ/ಕಲಬುರಗಿ: ದಕ್ಷಿಣ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಸಿಮೆಂಟ್ ಮಿಕ್ಸರ್ ಟ್ರಕ್‌ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಪಂಡರಪುರ ಮತ್ತು ಅಕ್ಕಲಕೋಟ್ ದೇವಾಲಯಗಳಿಗೆ ಭೇಟಿ ನೀಡಿ ಕರ್ನಾಟಕಕ್ಕೆ ಹಿಂದಿರುಗುತ್ತಿದ್ದ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾತ್ರಾರ್ಥಿಗಳ ತಂಡವನ್ನು ಹೊತ್ತ ಕ್ರೂಸರ್ ವಾಹನ ಕರ್ನಾಟಕದ ಕಲಬುರ್ಗಿಯ ಆಳಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಅಕ್ಕಲಕೋಟ ತಹಸಿಲ್‌ನ ಶಿರವಾಳವಾಡಿ ಗ್ರಾಮದ ಬಳಿ ಸಂಜೆ 5.30ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಐವರು ಮಹಿಳೆಯರು ಹಾಗೂ ಒಂದು ಮಗು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಲಾಪುರ ಕಡೆಗೆ ಹೋಗುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯು ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳು ಪ್ರಯಾಣಿಕರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಮೂರು ಮಹಿಳೆಯರು ಮತ್ತು ಎಂಟು ಪುರುಷರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com