ರಾಮನಗರದಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ
ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲಕಾರ ವಾತಾವರಣ ನಿರ್ಮಾಣವಾಗಿತ್ತು.
Published: 02nd March 2023 11:51 AM | Last Updated: 02nd March 2023 01:37 PM | A+A A-

ಕುಮಾರಸ್ವಾಮಿ, ಅಶ್ವತ್ಥ ನಾರಾಯಣ
ರಾಮನಗರ: ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲಕಾರ ವಾತಾವರಣ ನಿರ್ಮಾಣವಾಗಿತ್ತು.
ಕುಮಾರಸ್ವಾಮಿ ಆಗಮನಕ್ಕೂ ಮುನ್ನ ಆಸ್ಪತ್ರೆ ಉದ್ಘಾಟನೆ ಸರಿ ಅಲ್ಲ ಎಂದು ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಸಹ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪರಸ್ಪರ ಘೋಷಣೆ ಕೂಗುತ್ತಿದ್ದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆಯಿತು.
ಇದನ್ನೂ ಓದಿ: ರಾಮನಗರ: ಪ್ರೋಟೋಕಾಲ್ ವಿಚಾರದಲ್ಲಿ ಸಚಿವ ಅಶ್ವತ್ಥ ನಾರಾಯಣಗೆ ಡಿ.ಕೆ. ಸುರೇಶ್ ತರಾಟೆ!
ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದರೆ, ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಪರ ಘೋಷಣೆ ಕೂಗಿದರು. ಈ ವೇಳೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ: ಹಾರೋಹಳ್ಳಿ ತಾಲೂಕ್ ಕಚೇರಿ ಲೋಕಾರ್ಪಣೆ: ಡಾ. ಸಿ ಎನ್ ಅಶ್ವತ್ಥ ನಾರಾಯಣ, ಅನಿತಾ ಕುಮಾರಸ್ವಾಮಿ ಟ್ವೀಟ್ ವಾರ್
ನಂತರ ಆಗಮಿಸಿದ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರೇ ಆಸ್ಪತ್ರೆ ಉದ್ಘಾಟಿಸಲು ತಾವೇ ಹೇಳಿದ್ದು, ಆಸ್ಪತ್ರೆ ಉದ್ಘಾಟನೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಪಪಡಿಸಿದರು. ನಂತರ ಪರಿಸ್ಥಿತಿ ತಿಳಿಯಾಯಿತು.