ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ
ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published: 02nd March 2023 12:47 PM | Last Updated: 02nd March 2023 06:37 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ದಿನಗಳಿಂದ ಕ್ಯಾಂಪಸ್ ಒಳಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ವಿವಿ ಆಡಳಿತ ಮಂಡಳಿ ಸ್ಪಂದಿಸದ ಹಿನ್ನೆಲೆ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಭಿಜಿತ್ ಎಂಬ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿದ್ದ.
ಇದನ್ನೂ ಓದಿ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಾವು; ಆತ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ!
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಅಜಿಂ ಪ್ರೇಮ್ ಜಿ ವಿವಿ, ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಮೃತಪಟ್ಟಿರುವುದು ದುರದೃಷ್ಟಕರ ಸಂಗತಿ. ಘಟನೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಮತ್ತು ತೀವ್ರ ದುಖಃವಾಗಿದೆ. ಆದರೆ, ವಿದ್ಯಾರ್ಥಿ ಉಪವಾಸ ಪ್ರತಿಭಟನೆಯಲ್ಲಿ ಮೃತಪಟ್ಟಿಲ್ಲ. ವಿದ್ಯಾರ್ಥಿ ಉಪವಾಸ ಸತ್ಯಗ್ರಹ ವೇಳೆ ಮೃತಪಟ್ಟಿದ್ದಾನೆ ಎನ್ನುವುದು ಸುಳ್ಳು ಎಂದು ಹೇಳಿತ್ತು. ಈ ಹೇಳಿಕೆಗೆ ಇದೀಗ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.