ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ಕೇಳಿ ಬರುತ್ತಿದೆ ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ ಕೂಗು!

ರಾಷ್ಟ್ರೀಯ ಲಿಂಗಾಯತ ಸಮ್ಮೇಳನ, ಶನಿವಾರ ಮತ್ತು ಭಾನುವಾರ ಬಸವಕಲ್ಯಾಣದಲ್ಲಿ ನಡೆಯಲಿದೆ. ಪ್ರತ್ಯೇಕ ಧರ್ಮ ಬೇಡಿಕೆಗಾಗಿ ಒತ್ತಾಯಿಸಿ ಹೋರಾಟದ ಬಗ್ಗೆ ಪ್ರತ್ಯೇಕ ಅಧಿವೇಶನದಲ್ಲಿ ಚರ್ಚಿಸಲಾಗುವುದು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಬೇಡಿಕೆ ಮತ್ತೆ ಕೇಳಿ ಬರುತ್ತಿದೆ. ಮೊದಲ ರಾಷ್ಟ್ರೀಯ ಮಟ್ಟದ ಲಿಂಗಾಯತ ಮಹಾ ಅಧಿವೇಶನದ ವೇಳೆ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಬೇಡಿಕೆಗೆ ಮರು ಚಾಲನೆ ನೀಡಲು ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಜಾಗತೀಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್‌ಎಂ ಜಾಮದಾರ್ ಹೇಳಿದ್ದಾರೆ.

ರಾಷ್ಟ್ರೀಯ ಲಿಂಗಾಯತ ಸಮ್ಮೇಳನ, ಶನಿವಾರ ಮತ್ತು ಭಾನುವಾರ ಬಸವಕಲ್ಯಾಣದಲ್ಲಿ ನಡೆಯಲಿದೆ. ಪ್ರತ್ಯೇಕ ಧರ್ಮ ಬೇಡಿಕೆಗಾಗಿ ಒತ್ತಾಯಿಸಿ ಹೋರಾಟದ ಬಗ್ಗೆ ಪ್ರತ್ಯೇಕ ಅಧಿವೇಶನದಲ್ಲಿ ಚರ್ಚಿಸಲಾಗುವುದು.

ಕೇಂದ್ರ ಸರ್ಕಾರವು 2018 ರಲ್ಲಿ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಲು ನಿರಾಕರಿಸಿದೆ ಹಾಗೂ ಇದಕ್ಕಾಗಿ ಕೆಲವು ಕಾರಣಗಳನ್ನು ನೀಡಿದೆ ಎಂದು ಜಾಮದಾರ್ ಹೇಳಿದ್ದಾರೆ. ಸಮ್ಮೇಳನದಲ್ಲಿ ಕಾರಣಗಳನ್ನು ಚರ್ಚಿಸಿ, ಜ್ಞಾಪಕ ಪತ್ರವನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಮುಂಬರುವ ವಾರಾಂತ್ಯದಲ್ಲಿ ಸಮ್ಮೇಳನದಲ್ಲಿ ಸಮಸ್ಯೆಯನ್ನು ಚರ್ಚಿಸಿದ ನಂತರ ಹೋರಾಟವನ್ನು ಮರುಪ್ರಾರಂಭಿಸುವುದಾಗಿ ಅವರು ತಿಳಿಸಿದ್ದಾರೆ.

ಪ್ರತ್ಯೇಕ ಧರ್ಮದ ಸ್ಥಾನಮಾನ ಕುರಿತ ವಿಷಯವನ್ನು ಚರ್ಚಿಸಲು ಜಾಗತಿಕ ಲಿಂಗಾಯತ ಮಹಾಸಭಾ ಕೈಗೊಂಡಿರುವ ನಿರ್ಧಾರವು ಕಾಂಗ್ರೆಸ್ ಪಕ್ಷವನ್ನು ಗೊಂದಲಕ್ಕೆ ಸಿಲುಕಿಸಿದೆ, ಏಕೆಂದರೆ ಲಿಂಗಾಯತ ಸಮುದಾಯದ ಬೇಡಿಕೆಯನ್ನು ಬೆಂಬಲಿಸುವುದು 2018 ರ ಚುನಾವಣೆಯ ಸಮಯದಲ್ಲಿ ಪಕ್ಷಕ್ಕೆ ಭಾರೀ ಹೊಡೆತ ಕೊಟ್ಟಿತ್ತು. ಚುನಾವಣೆಗೆ ಸ್ಪರ್ಧಿಸಿದ್ದ ಬಹುತೇಕ ಲಿಂಗಾಯತ ಮುಖಂಡರು ಸೋಲಿನತ್ತ ಮುಖ ಮಾಡಿರುವುದು ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಕೆಲವು ಕಾಂಗ್ರೆಸ್ ನಾಯಕರು ಜಾಗತಿಕ ಲಿಂಗಾಯತ ಮಹಾಸಭಾದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಸಮ್ಮೇಳನವು ಸಂಪೂರ್ಣವಾಗಿ ರಾಜಕೀಯೇತರವಾಗಲಿದ್ದು, ಯಾವುದೇ ರಾಜಕೀಯ ನಾಯಕರು ಇದರಲ್ಲಿ ಭಾಗವಹಿಸುತ್ತಿಲ್ಲ ಎಂದು ಅವರು ಹೇಳಿದರು. ಇದಲ್ಲದೆ, 2018 ರಲ್ಲಿ ಮತ್ತು ಈಗ ಪರಿಸ್ಥಿತಿಗಳು ವಿಭಿನ್ನವಾಗಿವೆ ಎಂದು  ಲಿಂಗಾಯತ ಮುಖಂಡರೊಬ್ಬರು  ತಿಳಿಸಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ನಾಯಕನಾಗಿ ಜಾಗತಿಕ ಲಿಂಗಾಯತ ಮಹಾಸಭಾದ ನಿರ್ಧಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ದಿನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಆದರೆ ಮಹಾಸಭಾದ ಪ್ರಧಾನ ಕಾರ್ಯದರ್ಶಿಯಾಗಿ, ಸ್ವಾತಂತ್ರ್ಯ ಪೂರ್ವದಿಂದಲೂ ಅಖಿಲ ಭಾರತ ವೀರಶೈವ ಮಹಾಸಭಾದ ನಿಲುವು ಲಿಂಗಾಯತ ವೀರಶೈವ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಕೊಡಿಸುವುದಾಗಿದೆ ಎಂದು ಹೇಳಿದರು.

ಬಸವಕಲ್ಯಾಣದ ಡಾ.ಚನ್ನಬಸವ ಪಟ್ಟದ ದೇವರು ಸಭಾಂಗಣದಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಎರಡು ದಿನಗಳ ಸಮ್ಮೇಳನವನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಉದ್ಘಾಟಿಸಲಿದ್ದಾರೆ.

ಸಾಹಿತಿ ಗೋ.ರೂ. ನಾಡೋಜ ಪ್ರಶಸ್ತಿ ಪುರಸ್ಕೃತ ಚೆನ್ನಬಸಪ್ಪ ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ಸಾಣೇಹಳ್ಳಿಯ ತರಳಬಾಳು ಶಾಖಾ ಬ್ರಾಹ್ಮಣಮಠದ ಶ್ರೀಗಳು, ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷರು, ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷರು ಸೇರಿದಂತೆ ವಿವಿಧ ಮಠಗಳ 40ಕ್ಕೂ ಹೆಚ್ಚು ಮಠಾಧೀಶರು ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com