ಲಂಚ ಸ್ವೀಕರಿಸಿದ ಆರೋಪ: ಮಾಡಾಳ್ ಪ್ರಶಾಂತ್ ಸೇರಿ ಐವರಿಗೆ 14 ದಿನ ನ್ಯಾಯಾಂಗ ಬಂಧನ

ಭ್ರಷ್ಟಾಚಾರ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಾಡಾಳ್ ಪ್ರಶಾಂತ್
ಮಾಡಾಳ್ ಪ್ರಶಾಂತ್

ಬೆಂಗಳೂರು: ಭ್ರಷ್ಟಾಚಾರ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಿನ್ನೆ ಸಾಯಂಕಾಲ ಅವರ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿ 40 ಲಕ್ಷ ರೂಪಾಯಿ ನಗದು ಸ್ವೀಕರಿಸುವ ವೇಳೆ ಮಾಡಾಳ್ ಪ್ರಶಾಂತ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ನಂತರ ನಡೆಸಿದ ತೀವ್ರ ಶೋಧ ಇಂದು ಬೆಳಗಿನ ಜಾವದವರೆಗೂ ಮುಂದುವರಿದು ಅವರ ನಿವಾಸ ಮತ್ತು ಕಚೇರಿಯಿಂದ ಬರೋಬ್ಬರಿ 6 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಇನ್ನು ಚಿನ್ನ, ಬೆಳ್ಳಿಗಳು ಸಹ ಸಿಗುವ ಸಾಧ್ಯತೆಯಿದ್ದು ಅದಕ್ಕೆ ಸಹ ಶೋಧ ನಡೆಸುತ್ತಿದ್ದಾರೆ.

ಇಂದು ಬೆಳಗ್ಗೆ ಮಾಡಾಳ್ ಪ್ರಶಾಂತ್ ಅವರನ್ನು ಲೋಕಾಯುಕ್ತ ನ್ಯಾಯಾಲಯ ಮುಂದೆ ಹಾಜರುಪಡಿಸಲಾಗಿದ್ದು ಮತ್ತಷ್ಟು ವಿಚಾರಣೆಗೆ 14 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಲೋಕಾಯುಕ್ತ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. 

ಪ್ರಶಾಂತ್ ಮಾಡಾಳ್ ಜೊತೆಗೆ ಅವರ ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೋಲಸ್, ಗಂಗಾಧರ್ ಎಂಬುವವರನ್ನು ಸಹ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com