ವಿಧಾನಸಭೆ ಚುನಾವಣೆಗೂ ಮುನ್ನ ಅದಾನಿ, ಅಂಬಾನಿ, ಆ್ಯಪಲ್‌ ನಿಂದ ಕರ್ನಾಟಕದಲ್ಲಿ ಭಾರಿ ಹೂಡಿಕೆ!

ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕರ್ನಾಟಕದಲ್ಲಿ ಅದಾನಿ, ಅಂಬಾನಿ, ಆ್ಯಪಲ್‌ ಸಂಸ್ಥೆಗಳು ಭಾರಿ ಪ್ರಮಾಣದ ಹೂಡಿಕೆ ಮಾಡಿ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಮುಂದಾಗಿವೆ ಎಂದು ಹೇಳಲಾಗಿದೆ.
ಕರ್ನಾಟಕದಲ್ಲಿ ಭಾರಿ ಹೂಡಿಕೆ
ಕರ್ನಾಟಕದಲ್ಲಿ ಭಾರಿ ಹೂಡಿಕೆ
Updated on

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕರ್ನಾಟಕದಲ್ಲಿ ಅದಾನಿ, ಅಂಬಾನಿ, ಆ್ಯಪಲ್‌ ಸಂಸ್ಥೆಗಳು ಭಾರಿ ಪ್ರಮಾಣದ ಹೂಡಿಕೆ ಮಾಡಿ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಮುಂದಾಗಿವೆ ಎಂದು ಹೇಳಲಾಗಿದೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರಕಾರ ಕರ್ನಾಟಕದಲ್ಲಿ ಸುಮಾರು ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಹೊಸ 300 ಎಕರೆ ಕಾರ್ಖಾನೆಯಲ್ಲಿ ಆಪಲ್ ಫೋನ್‌ಗಳನ್ನುತಯಾರಿಸಲಾಗುತ್ತದೆ ಎನ್ನಲಾಗಿದೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ರಾಜೀವ್ ಚಂದ್ರಶೇಖರ್ ಅವರು, 'ಕರ್ನಾಟಕದ ಹೊಸ 300 ಎಕರೆ ಕಾರ್ಖಾನೆಯಲ್ಲಿ ಆಪಲ್ ಫೋನ್‌ಗಳನ್ನು ತಯಾರಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ. 

ಇದಕ್ಕೆ ಇಂಬು ನೀಡುವಂತೆ ಸಿಎಂ ಬೊಮ್ಮಾಯಿ ಅವರೂ ಕೂಡ "ರಾಜ್ಯದಲ್ಲಿ ಶೀಘ್ರದಲ್ಲೇ ಆಪಲ್ ಫೋನ್‌ಗಳನ್ನು ತಯಾರಿಸಲಾಗುವುದು. ಇದರಿಂದ ಸುಮಾರು 100,000 ಉದ್ಯೋಗಗಳನ್ನು ಸೃಷ್ಟಿಸುವುದಲ್ಲದೆ, ಇದು ಕರ್ನಾಟಕಕ್ಕೆ ಸಂಪೂರ್ಣ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಅಂತೆಯೇ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಶುಕ್ರವಾರ ಆಂಧ್ರಪ್ರದೇಶದಲ್ಲಿ 10 ಗಿಗಾವ್ಯಾಟ್ ನವೀಕರಿಸಬಹುದಾದ ಸೌರಶಕ್ತಿ ಯೋಜನೆಯನ್ನು ಸ್ಥಾಪಿಸಲು ಹೂಡಿಕೆ ಮಾಡುವುದಾಗಿ ಹೇಳಿದ್ದಾರೆ.

ಅದಾನಿ ಸಮೂಹವು ಆಂಧ್ರಪ್ರದೇಶದಲ್ಲಿ ಎರಡು ಹೊಸ ಸಿಮೆಂಟ್ ಉತ್ಪಾದನಾ ಘಟಕಗಳು, 15,000 ಮೆಗಾವ್ಯಾಟ್ ನವೀಕರಿಸಬಹುದಾದ ವಿದ್ಯುತ್ ಯೋಜನೆಗಳು ಮತ್ತು ಡೇಟಾ ಸೆಂಟರ್ ಅನ್ನು ಸ್ಥಾಪಿಸಲಿದೆ, ಏಕೆಂದರೆ ಅದು ರಾಜ್ಯದಲ್ಲಿ ತನ್ನ ಅಸ್ತಿತ್ವವನ್ನು ದ್ವಿಗುಣಗೊಳಿಸಲು ಮುಂದಾಗುತ್ತದೆ ಎನ್ನಲಾಗಿದೆ.

ಇನ್ನು ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 2023 ರ ಮೊದಲು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com