ಹಾಸನ: ಡಿ.ಕೆ ಶಿವಕುಮಾರ್ ಹೇಳಿಕೆಯಿಂದ ಜೆಡಿಎಸ್ ನಾಯಕರು, ಹೆಚ್ ಪಿ ಸ್ವರೂಪ್ ಗೆ ಆಘಾತ!

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಕುರಿತು ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಸ್ವತಃ ಸ್ವರೂಪ್ ಹಾಗೂ ಸ್ಥಳೀಯ ಜೆಡಿಎಸ್ ನಾಯಕರ ಆಘಾತಕ್ಕೆ ಕಾರಣವಾಗಿದೆ.
ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್
ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಕುರಿತು ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಸ್ವತಃ ಸ್ವರೂಪ್ ಹಾಗೂ ಸ್ಥಳೀಯ ಜೆಡಿಎಸ್ ನಾಯಕರ ಆಘಾತಕ್ಕೆ ಕಾರಣವಾಗಿದೆ.

ಟಿಕೆಟ್ ಆಕಾಂಕ್ಷಿ ಸ್ವರೂಪ್ ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ. ಸೂಕ್ತ ಸಮಯದಲ್ಲಿ ವಿವರಗಳನ್ನು ಬಹಿರಂಗಪಡಿಸುತ್ತೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. 

ಪ್ರಜಾಧ್ವನಿ ಯಾತ್ರೆಯ ನೇತೃತ್ವ ವಹಿಸಿದ್ದ ಡಿ.ಕೆ ಶಿವಕುಮಾರ್, ಜೆಡಿಎಸ್ ಶಾಸಕರಾದ ಎಟಿರಾಮಸ್ವಾಮಿ, ಕೆಎಂ ಶಿವಲಿಂಗೇಗೌಡ, ಹಾಗೂ ಹೆಚ್ ಪಿ ಸ್ವರೂಪ್ ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಕೇಳಿದ ಹೆಚ್ ಪಿ ಸ್ವರೂಪ್ ಹಾಗೂ ಬೆಂಬಲಿಗರು ಆಘಾತಕ್ಕೊಳಾಗಿದ್ದು, ಈಗಲೂ ಜೆಡಿಎಸ್ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿರುವ ಸ್ವರೂಪ್ ಗೆ ಇದು ಹಿನ್ನಡೆಯುಂಟುಮಾಡುವ ಸಾಧ್ಯತೆ ಇದೆ.

ಇನ್ನು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಸಹ ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯಿಂದ ಅಚ್ಚರಿಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಈ ಹೇಳಿಕೆಯಿಂದ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಪಡೆಯಲು ಇದ್ದ ಅಡೆತಡೆ ನಿವಾರಣೆಯಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. 

ಡಿ.ಕೆ ಶಿವಕುಮಾರ್ ಹೇಳಿಕೆಯನ್ನು ತಳ್ಳಿಹಾಕಿರುವ ಸ್ವರೂಪ್, ಯಾವುದೇ ಕಾಂಗ್ರೆಸ್ ನಾಯಕರೂ ತಮ್ಮೊಂದಿಗೆ ರಾಜಕೀಯವನ್ನು ಚರ್ಚಿಸಿಲ್ಲ, ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ತಾವು ಜೆಡಿಎಸ್ ನಾಯಕರ ಬೆಂಬಲದಿಂದ ಬೆಳೆದಿರುವುದರಿಂದ ಕಾಂಗ್ರೆಸ್ ಅಥವಾ ಇನ್ನು ಯಾವುದೇ ರಾಜಕೀಯ ಪಕ್ಷ ಸೇರಲು ತಮಗೆ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಂದು ವೇಳೆ ಜೆಡಿಎಸ್ ನಲ್ಲಿ ಟಿಕೆಟ್ ನ್ನು ಬೇರೆ ಯಾರಿಗಾದರೂ ನೀಡಿದರೂ ತಾವು ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಸ್ವರೂಪ್ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗೆ ರೇವಣ್ಣ ಲಭ್ಯವಿರಲಿಲ್ಲ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com