ದೊರಕದ ಭೂಪತ್ರ: ಲಕ್ಕುಂಡಿ ಗ್ರಾಮಸ್ಥರ ಧರಣಿ; ಬೇಡಿಕೆ ಈಡೇರಿಸದಿದ್ದರೆ ವಿಧಾನಸಭೆ ಚುನಾವಣೆ ಬಹಿಷ್ಕಾರ!

ಜಮೀನಿಗೆ ಸಂಬಂಧಿಸಿದ ದಾಖಲೆ ಪತ್ರ ನೀಡಲು ವಿಳಂಬ ಮಾಡುತ್ತಿರುವುದರಿಂದ ಆಕ್ರೋಶಗೊಂಡ ಗದಗ ಜಿಲ್ಲೆಯ ಲಕ್ಕುಂಡಿಯ 72 ಕುಟುಂಬಗಳು ಕಳೆದ ಎರಡು ದಿನಗಳಿಂದ ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸುತ್ತಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 
ಗುರುವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಮಲಗಿರುವ ಲಕ್ಕುಂಡಿ ಗ್ರಾಮಸ್ಥರು.
ಗುರುವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಮಲಗಿರುವ ಲಕ್ಕುಂಡಿ ಗ್ರಾಮಸ್ಥರು.

ಗದಗ: ಜಮೀನಿಗೆ ಸಂಬಂಧಿಸಿದ ದಾಖಲೆ ಪತ್ರ ನೀಡಲು ವಿಳಂಬ ಮಾಡುತ್ತಿರುವುದರಿಂದ ಆಕ್ರೋಶಗೊಂಡ ಗದಗ ಜಿಲ್ಲೆಯ ಲಕ್ಕುಂಡಿಯ 72 ಕುಟುಂಬಗಳು ಕಳೆದ ಎರಡು ದಿನಗಳಿಂದ ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸುತ್ತಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಲಕ್ಕುಂಡಿ ಹೊರವಲಯದಲ್ಲಿ ವಸತಿ ಯೋಜನೆಯಡಿ ಏಳು ಎಕರೆ ಜಮೀನಿನ ದಾಖಲೆಗಳನ್ನು ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಆದರೆ, ಇನ್ನುಳಿದ ನಿವೇಶನ, ನಿವೇಶನಗಳ ದಾಖಲೆಗಳು ಫಲಾನುಭವಿಗಳಿಗೆ ಸಿಗಬೇಕಿದ್ದು, 72 ಕುಟುಂಬಗಳು ಅದನ್ನು ಪಡೆಯಲು ಹರಸಾಹಸ ಪಡುತ್ತಿವೆ. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ. ಆದರೆ, ಸ್ಥಳೀಯ ನಾಯಕರು ತಮ್ಮ ಜನರಿಗೆ ಸಹಾಯ ಮಾಡುತ್ತಿದ್ದಾರೆ, ಜನರ ನಡುವೆ ಒಡಕು ಮೂಡಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಗ್ರಾಮಸ್ಥರಿಂದ ಪ್ರತಿಭಟನೆಯ ಬೆದರಿಕೆಯನ್ನು ಎದುರಿಸುತ್ತಿರುವ ಗ್ರಾಮ ಪಂಚಾಯಿತಿ ಮುಖಂಡರು, ಸಮಯಾವಕಾಶ ಬೇಕು. ಶೀಘ್ರದಲ್ಲೇ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನ್ಯಾಯ ಸಿಗುವವರೆಗೂ ಕಚೇರಿ ಎದುರು ಧರಣಿ ನಡೆಸುವುದಾಗಿ ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ದಾಖಲೆಗಳನ್ನು ನೀಡುವಂತೆ ಪಂಚಾಯಿತಿಗೆ ಮೊರೆ ಹೋಗುತ್ತಿದ್ದೇವೆ. 2018ರಲ್ಲಿ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿದಾಗ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಅವರು ತಮ್ಮ ಮಾತಿನಿಂದ ಹಿಂದೆ ಸರಿದಿದ್ದು, ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ. ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳು ನಮ್ಮ ಬೇಡಿಕೆ ಈಡೇರಿಸುವವರೆಗೆ ಕದಲುವುದಿಲ್ಲ’ ಎಂದು ಗ್ರಾಮಸ್ಥರಾದ ನಾಗಮ್ಮ ಎಚ್. ಹೇಳುತ್ತಾರೆ.

ಲಕ್ಕುಂಡಿ ಗ್ರಾಮ ಪಂಚಾಯಿತಿಯ ಸಿಬ್ಬಂದಿಯೊಬ್ಬರು ಮಾತನಾಡಿ, ಜಮೀನಿನ ದಾಖಲೆಗಳನ್ನು ನೀಡುವುದಾಗಿ ಅವರಿಗೆ ಹೇಳಿದ್ದೇವೆ. ಸದ್ಯ ಅವರ ಹೆಸರು ಪಟ್ಟಿಯಲ್ಲಿದೆ. ಇತರ ಸಮಸ್ಯೆಗಳಿವೆ ಮತ್ತು ಇದು ಸಮಯ ತೆಗೆದುಕೊಳ್ಳುತ್ತದೆ. ಪರಿಶೀಲನೆಯನ್ನು ಪೂರ್ಣಗೊಳಿಸಿದ ನಂತರ ನಾವು ಅವರಿಗೆ ದಾಖಲೆಗಳನ್ನು ನೀಡುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com