ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ಐಎಯಿಂದ ಮೊತ್ತೋರ್ವ ಆರೋಪಿ ಬಂಧನ

ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಪ್ರವೀಣ್ ನೆಟ್ಟಾರು
ಪ್ರವೀಣ್ ನೆಟ್ಟಾರು

ಬೆಂಗಳೂರು: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬಂಧಿತ ಆರೋಪಿಯನ್ನು ತೌಫೀಲ್​ ಎಂದು ಗುರ್ತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ ಈ ಹಿಂದೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್​ಐಎ ಅಧಿಕಾರಿಗಳು ತೌಫಿಲ್ ಮನೆ ಬಳಿಗೆ ಹೋಗಿದ್ದಾರೆ. ನಂತರ ಇಬ್ಬರು ಅಧಿಕಾರಿಗಳು ಫ್ಲಂಬರ್ ಅಂತ ಕೈಯಲ್ಲಿ ರಿಂಚ್ ಹಿಡಿದು ಮನೆ ಒಳಗೆ ಹೋಗಿದ್ದಾರೆ. ಈ ವೇಳೆ ತೌಫಿಲ್ ಮಟನ್​ ಕತ್ತರಿಸುತ್ತಿರುವುದು ಕಂಡುಬಂದಿದೆ.

ನಂತರ ಮತ್ತಿಬ್ಬರು ಒಳಗೆ ಬಂದಿದ್ದನ್ನು ನೋಡಿದ ತೌಘಿಲ್​​, ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಇದನ್ನು ತಿಳಿದ ಉಳಿದ ಅಧಿಕಾರಿಗಳು ಏಕಕಾಲಕ್ಕೆ ಒಳಗೆ ಬಂದು ತೌಘಿಲ್​ನನ್ನು ಲಾಕ್​ ಮಾಡಿ, ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಪ್ರವೀಣ್ ನೆಟ್ಟಾರುನನ್ನು ಜುಲೈ 26 ರಂದು ಆತನ ಕೋಳಿ ಅಂಗಡಿಗೆ ನುಗ್ಗಿ ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com