ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ರೂ.3 ಕೋಟಿ ನಗದು ವಶಕ್ಕೆ
ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ನಗರ ಅಪರಾಧ ವಿಭಾಗ (ಸಿಸಿಬಿ)ದಳದ ಪೊಲೀಸರು ದಾಳಿ ನಡೆಸಿದ್ದು, ಲೆಕ್ಕಕ್ಕೆ ಸಿಗದ 3 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published: 05th March 2023 10:38 AM | Last Updated: 05th March 2023 10:38 AM | A+A A-

ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು.
ಹುಬ್ಬಳ್ಳಿ: ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ನಗರ ಅಪರಾಧ ವಿಭಾಗ (ಸಿಸಿಬಿ)ದಳದ ಪೊಲೀಸರು ದಾಳಿ ನಡೆಸಿದ್ದು, ಲೆಕ್ಕಕ್ಕೆ ಸಿಗದ 3 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ತೆರಿಗೆ ವಂಚನೆ ನಡೆದಿದ್ದೇ ಆದರೆ, ತನಿಖೆ ನಡೆಸಲು ತನಿಖಾಧಿಕಾರಿ ಎಸ್.ಕೆ.ಪಟ್ಟಣಕುಡಿ ಅವರಿಗೆ ಆದಾಯ ತೆರಿಗೆ ಇಲಾಖೆ ನೆರವು ನೀಡಲಿದೆ.
ಎಸಿಪಿ ನಾರಾಯಣ ಬರ್ಮಾನಿ ನೇತೃತ್ವದ ಸಿಸಿಬಿ ದಳವು, ಉದ್ಯಮಿ ಮನೆಲ ಮೇಲೆ ದಾಳಿ ನಡೆಸಿ 500 ರೂಪಾಯಿ ಮುಖಬೆಲೆಯ ಲೆಕ್ಕವಿಲ್ಲದ ನಗದನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಇದೀಗ ಹಣದ ಮೂಲ ಪತ್ತೆ ಮಾಡಲು ತನಿಖೆ ಮುಂದುವರೆದಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರು ತಿಳಿಸಿದ್ದಾರೆ.