ಮಹಿಳಾ ದಿನಾಚರಣೆ: ನಾಳೆ ಬಿಎಂಟಿಸಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಎಂಟಿಸಿ ಬಸ್‌ ಗಳಲ್ಲಿ ಮಹಿಳೆಯರು ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಎಂಟಿಸಿ ಬಸ್‌ ಗಳಲ್ಲಿ ಮಹಿಳೆಯರು ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದು.

ಮಾರ್ಚ್ 7ರ ಮಧ್ಯರಾತ್ರಿ 12 ಗಂಟೆಯಿಂದ ಮಾರ್ಚ್ 8ರ ಮಧ್ಯರಾತ್ರಿ 12 ಗಂಟೆ ರವರೆಗೆ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಿಬಿಎಂಟಿಸಿ ಬಸ್​​ಗಳಲ್ಲಿ ಪ್ರಯಾಣಿಸಬಹುದು. ವೋಲ್ವೋ, ಎಸಿ ಬಸ್, ವಾಯುವ್ಯ ರಸ್ತೆ ಸಾರಿಗೆ, ಏರ್ಪೋರ್ಟ್ ಬಸ್ ಸೇರಿದಂತೆ ಬಿಎಂಟಿಸಿಯ ಎಲ್ಲ ಮಾದರಿಯ ಬಸ್​​ನಲ್ಲಿ ಉಚಿತವಾಗಿ ನಾಳೆ ಒಂದು ದಿನ ಮಹಿಳೆಯರು ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಯಾವುದೇ ದಾಖಲಾತಿ, ಗುರುತಿನ ಚೀಟಿಯ ಅವಶ್ಯಕತೆ ಇಲ್ಲ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಬಿಎಂಟಿಸಿ ವ್ಯಸ್ಥಾಪಕ ನಿದೇಶಕಿ ಸತ್ಯವತಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಅದರಂತೆ ಸರ್ಕಾರವು ಒಪ್ಪಿಗೆ ನೀಡಿದ್ದು, ಮಹಿಳೆಯರಿಗೆ ಒಂದು ದಿನದ ಮಟ್ಟಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com