ಬೆಂಗಳೂರು-ಮೈಸೂರು ರಾಷ್ಟ್ರೀಯ ಹೈವೇ ಯೋಜನೆಗೂ ಶುರುವಾಯ್ತು ಕ್ರೆಡಿಟ್ ವಾರ್: ಕಾಮಗಾರಿ ಪರಿಶೀಲನೆಗೆ ಸಿದ್ದರಾಮಯ್ಯ ಮುಂದು

ಚುನಾವಣಾ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ಕ್ರೆಡಿಟ್ ವಾರ್ ಜೋರಾಗಿದೆ. ಈ ಹಿಂದೆ ಬೆಳಗಾವಿಯ ರಾಜಹಂಸಗಡ ಕೋಟೆಯ ಶಿವಾಜಿ ಪ್ರತಿಮೆ ಕುರಿತು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕ್ರೆಡಿಟ್ ವಾರ್ ಶುರುವಾಗಿದ್ದು, ಇದೀಗ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ವಿಚಾರವಾಗಿ ಕೈ-ಕಮಲ ವಾರ್ ಶುರುವಾಗಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಚುನಾವಣಾ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ಕ್ರೆಡಿಟ್ ವಾರ್ ಜೋರಾಗಿದೆ. ಈ ಹಿಂದೆ ಬೆಳಗಾವಿಯ ರಾಜಹಂಸಗಡ ಕೋಟೆಯ ಶಿವಾಜಿ ಪ್ರತಿಮೆ ಕುರಿತು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕ್ರೆಡಿಟ್ ವಾರ್ ಶುರುವಾಗಿದ್ದು, ಇದೀಗ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ವಿಚಾರವಾಗಿ ಕೈ-ಕಮಲ ವಾರ್ ಶುರುವಾಗಿದೆ.

ಹೆದ್ದಾರಿ ಉದ್ಘಾಟನೆಗೆ ಐದು ದಿನ ಮುಂಚಿತವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಹೆದ್ದಾರಿ ಕಾಮಗಾರಿಯನ್ನು ಪರಿಶೀಲನೆ ನಡೆಸುವುದಾಗಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮಾರ್ಚ್ 9ರಂದು ಬೆಂಗಳೂರು-ಮೈಸೂರು ಹೆದ್ದಾರಿ ಪರಿಶೀಲನೆ ನಡೆಸುತ್ತೇನೆ. ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು. ಪ್ರತಾಪ್ ಸಿಂಹ ಅವರದ್ದಾಗಲಿ, ಬಿಜೆಪಿ ಸರ್ಕಾರದ್ದಾಗಲಿ ಯಾವುದೇ ಪಾತ್ರ ಇಲ್ಲ. ಪ್ರತಾಪ್ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲವು ಕಿಲೋಮೀಟರ್ ರಸ್ತೆ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆಂದು ಹೇಳಿದರು.

ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರಿಂದ ಕಾಮಗಾರಿಗೆ ಮಂಜೂರಾತಿ ಪಡೆಯಲು ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಕಾರಣ. ಮಹದೇವಪ್ಪನವರಿಗೆ ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪನವರು ಮುಂದೆ ನಿಂತು ಈ ರಸ್ತೆಯನ್ನು ಮಾಡಿಸಿದರು. ಹೆದ್ದಾರಿ ಯೋಜನೆ ನಮ್ಮ ಸರ್ಕಾರದ ಕೊಡುಗೆ ಎಂದು ಪುನರುಚ್ಚರಿಸಿದರು.

ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಯುಪಿಎ ಸರಕಾರ 2000 ಕಿ.ಮೀ ಉದ್ದದ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಪಿಡಬ್ಲ್ಯುಡಿ ಸಚಿವರು ಯೋಜನೆಯ ಅನುಷ್ಠಾನಕ್ಕೆ ಶ್ರಮಿಸಿದ್ದರು. ಇದರ ಪರಿಣಾಮವಾಗಿ ಎನ್‌ಡಿಎ ಸರ್ಕಾರ ಯೋಜನೆಯನ್ನು ಮುಂದುವರಿಸಿತು. ಕಾಂಗ್ರೆಸ್ ಕೊಡುಗೆಯನ್ನು ಜನತೆ ಅರಿತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com