ಹೊರಗಿನವರಿಂದ ‘ಬ್ರ್ಯಾಂಡ್ ಬೆಂಗಳೂರು’ ಖ್ಯಾತಿಗೆ ಧಕ್ಕೆ: ಸಿಎಂ ಬೊಮ್ಮಾಯಿ ಅಸಮಾಧಾನ

ಹೊರಗಿನವರಿಂದ ‘ಬ್ರ್ಯಾಂಡ್ ಬೆಂಗಳೂರು’ ಖ್ಯಾತಿಗೆ ಧಕ್ಕೆ ತರುವ ಪ್ರಯತ್ನಗಳಾಗುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಹೊರಗಿನವರಿಂದ ‘ಬ್ರ್ಯಾಂಡ್ ಬೆಂಗಳೂರು’ ಖ್ಯಾತಿಗೆ ಧಕ್ಕೆ ತರುವ ಪ್ರಯತ್ನಗಳಾಗುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ಬೆಳ್ಳಂದೂರು, ಮಹದೇವಪುರ, ಹೆಣ್ಣೂರು, ತಲಘಟ್ಟಪುರ ಸಂಚಾರ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರು ನಗರಕ್ಕಿಂತ ದೇಶದ ಇತರೆ ಮಹಾನಗರಗಳಲ್ಲಿ ಹೆಚ್ಚಿನ ಸಮಸ್ಯೆಗಳಿದ್ದರೂ ಬೆಂಗಳೂರಿನಲ್ಲಿ ನಡೆದ ಸಣ್ಣ ಘಟನೆಯನ್ನು ಹೈಲೈಟ್ ಮಾಡಿ ನಗರದ ಮೂಲಸೌಕರ್ಯವನ್ನೇ ಟ್ರೋಲ್ ಮಾಡಿ ಟೀಕಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೊರಗಿನವರಿಂದ ಸಾಮಾಜಿಕ ಮಾಧ್ಯಮದಲ್ಲಿ ಬ್ರ್ಯಾಂಡ್ ಬೆಂಗಳೂರು ಖ್ಯಾತಿಗೆ ಧಕ್ಕೆಯುಂಟಾಗುವ ಪ್ರಯತ್ನಗಳು ನಡೆಯುತ್ತಿವೆ. ಕಳೆದ ವರ್ಷ ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಾತ್ರ ಪ್ರವಾಹವಿತ್ತು ಪರಿಸ್ಥಿತಿ ಎದುರಾಗಿತ್ತು. ಆದರೆ, ಇಡೀ ನಗರವೇ ಮುಳುಗಿಹೋಗಿದೆ ಎಂದು ಬಿಂಬಿಸಲಾಗಿತ್ತು. ದೇಶವಷ್ಟೇ ಅಲ್ಲ, ವಿದೇಶದ ಪ್ರಮುಖ ನಗರಗಳಲ್ಲೂ ಸಮಸ್ಯೆಗಳಿವೆ, ಲಂಡನ್, ನ್ಯೂಯಾರ್ಕ್ ಅಥವಾ ಶಾಂಘೈ ಆಗಿರಬಹುದು. ಬೆಳವಣಿಗೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಯಾವಾಗಲೂ ಇದ್ದೇ ಇರುತ್ತವೆ. ಆದರೆ, ನಮ್ಮ ಗಮನವು ಸಮಸ್ಯೆಗಳನ್ನು ಪರಿಹರಿಸಲು ಪರಿಹಾರಗಳ ಮೇಲೆ ಇರಬೇಕು ತಿಳಿಸಿದರು.

ಏತನ್ಮಧ್ಯೆ, ಹೆಚ್ಚಿನ ಸಾಂದ್ರತೆಯ ಕಾರಿಡಾರ್‌ಗಳಲ್ಲಿ ವಾಹನಗಳ ತಡೆರಹಿತ ಸಂಚಾರವನ್ನು ಖಚಿತಪಡಿಸಿಕೊಳ್ಳುವ ವ್ಯವಸ್ಥೆಯನ್ನು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಪರಿಚಯಿಸಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು ನಗರದಲ್ಲಿ ಸಂಚಾರ ಸುಗಮಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹೊಸ ನಾಲ್ಕು ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ, ಬೆಂಗಳೂರಿಗೆ ಇನ್ನೂ ಆರು ಹೊಸ ಸಂಚಾರ ಪೊಲೀಸ್ ಠಾಣೆಗಳನ್ನು ಬಜೆಟ್‌ನಲ್ಲಿ ಮಂಜೂರು ಮಾಡಲಾಗಿದ್ದು, ಅವುಗಳು ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ. ಇದಲ್ಲದೆ, ಒಂಬತ್ತು ಹೊಸ ಕಾನೂನು ಮತ್ತು ಸುವ್ಯವಸ್ಥೆ ಕೇಂದ್ರಗಳನ್ನು ಕೂಡ ಸ್ಥಾಪಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com