ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ದಿನ ಶೇ.95.5 ರಷ್ಟು ವಿದ್ಯಾರ್ಥಿಗಳು ಹಾಜರು; ಇಬ್ಬರು ಡಿಬಾರ್

ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಾದ್ಯಂತ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಶೇ.95.5 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಕೆಎಲ್‌ಇ ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗೂ ಮುನ್ನ ಓದಿಕೊಳ್ಳುತ್ತಿರುವುದು.
ಬೆಂಗಳೂರಿನ ಕೆಎಲ್‌ಇ ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗೂ ಮುನ್ನ ಓದಿಕೊಳ್ಳುತ್ತಿರುವುದು.

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಾದ್ಯಂತ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಶೇ.95.5 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
    
ಪರೀಕ್ಷೆಯ ಮೊದಲ ದಿನವಾದ ನಿನ್ನೆ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗಳು ನಡೆದವು. 5.33 ಲಕ್ಷ ವಿದ್ಯಾರ್ಥಿಗಳ ಪೈತಿ 5.1 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ, ಒಟ್ಟು 23,771 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಮೊದಲ ದಿನವೇ ಇಬ್ಬರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದು ಎರಡು ಅವ್ಯವಹಾರ ಪ್ರಕರಣಗಳು ವರದಿಯಾಗಿವೆ. ಬೆಳಗಾವಿ ಹಾಗೂ ಯಾದಗಿರಿಯಲ್ಲಿ ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ.98.99ರಷ್ಟು ವಿದ್ಯಾರ್ಥಿಗಳ ಹಾಜರಾತಿ ದಾಖಲಾಗಿದ್ದರೆ, ಬೀದರ್‌ನಲ್ಲಿ ಅತಿ ಕಡಿಮೆ ಅಂದರೆ ಶೇ.90.49ರಷ್ಟು ವಿದ್ಯಾರ್ಥಿಗಳ ಹಾಜರಾತಿ ದಾಖಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಕ್ರಮವಾಗಿ ಶೇ.95.73 ಮತ್ತು ಶೇ.96.8ರಷ್ಟು ದಾಖಲಾಗಿವೆ.

ಈ ನಡುವೆ ರಾಜ್ಯದಲ್ಲಿ ಹಿಜಾಬ್ ಧರಿಸುವ ಸಂಬಂಧ ಯಾವುದೇ ರೀತಿಯ ಪ್ರಮುಖ ಘಟನೆಗಳು ನಡೆದಿಲ್ಲ ಎಂದು ಶಿಕ್ಷಣ ಇಲಾಖೆಯ ಮೂಲಗಳು ಮಾಹಿತಿ ನೀಡಿದೆ.

ಈ ಹಿಂದೆ ಹೇಳಿಕೆ ನೀಡಿದ್ದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯೊಳಗೆ ಬಿಡುವುದಿಲ್ಲ ಎಂದು ಹೇಳಿದ್ದರು.

ಬೆಂಗಳೂರಿನ ಮಲ್ಲೇಶ್ವರಂ ಪ್ರಿ-ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಪರೀಕ್ಷಾ ಹಾಲ್‌ಗೆ ವಿದ್ಯಾರ್ಥಿನಿಯೊಬ್ಬಳು ಪ್ರವೇಶಿಸಿದ್ದು, ಈ ವೇಳೆ ಪ್ರಾಂಶುಪಾಲರ ಮನವಿ ಬಳಿಕ ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆದಿದ್ದಾಳೆಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com