ಯುವ ಮತದಾರರ ಸೆಳೆಯುವ ತಂತ್ರ: 12 ಸಾವಿರ ವಿವೇಕಾನಂದ ಸ್ವ-ಸಹಾಯ ಗುಂಪುಗಳ ರಚನೆಗೆ ರಾಜ್ಯ ಸರ್ಕಾರ ಮುಂದು
ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲಾ ಎರಡರಂತೆ 12 ಸಾವಿರ ವಿವೇಕಾನಂದ ಸ್ವಸಹಾಯ ಗುಂಪುಗಳನ್ನು (SHGs) ರಚಿಸಲು ಆದೇಶ ಹೊರಡಿಸಿದೆ. ಇದರೊಂದಿಗೆ, ಸರ್ಕಾರವು ಯುವ ಮತದಾರರನ್ನು ಸೆಳೆಯಲು ಯತ್ನಿಸುತ್ತಿದೆ.
Published: 11th March 2023 08:29 AM | Last Updated: 11th March 2023 04:40 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲಾ ಎರಡರಂತೆ 12 ಸಾವಿರ ವಿವೇಕಾನಂದ ಸ್ವಸಹಾಯ ಗುಂಪುಗಳನ್ನು (SHGs) ರಚಿಸಲು ಆದೇಶ ಹೊರಡಿಸಿದೆ. ಇದರೊಂದಿಗೆ, ಸರ್ಕಾರವು ಯುವ ಮತದಾರರನ್ನು ಸೆಳೆಯಲು ಯತ್ನಿಸುತ್ತಿದೆ. ಇದು ಆಡಳಿತ ಪಕ್ಷಕ್ಕೆ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಯುವ ಮತದಾರರನ್ನು ಸೆಳೆಯಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2018 ರಲ್ಲಿ 20 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮತದಾರರು 15 ಲಕ್ಷ ಮತ್ತು 2013 ರಲ್ಲಿ ಎಂಟು ಲಕ್ಷ ಮತದಾರರಿದ್ದರು. ಈಗ ಯುವ ಮತದಾರರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಅಲ್ಲದೆ, ಈ ಬಾರಿ, ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಯ ಅಂಕಿಅಂಶಗಳ ಪ್ರಕಾರ, ಸುಮಾರು ಏಳು ಲಕ್ಷ ಮೊದಲ ಬಾರಿಗೆ ಮತ ಚಲಾಯಿಸುವವರು ನೋಂದಣಿಯಾಗಿದ್ದಾರೆ.
ಇಂತಹ ಮತದಾರರ ಸಂಖ್ಯೆ 2018ರಲ್ಲಿ ನಾಲ್ಕು ಲಕ್ಷವಾಗಿದತ್ತು. ರಾಜಕೀಯ ಪಕ್ಷಗಳು ಈಗ ಈ ಭಾಗದ ಮತದಾರರನ್ನು ಗುರಿಯಾಗಿಸಿ ತಮ್ಮ ಸದಸ್ಯರನ್ನಾಗಿ ಮಾಡಿಕೊಳ್ಳುತ್ತಿವೆ. ಕರ್ನಾಟಕದಲ್ಲಿ 6 ಸಾವಿರ ಗ್ರಾಮ ಪಂಚಾಯಿತಿಗಳಿವೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದ್ದು, ಈ ಹಿಂದೆ ಪ್ರತಿ ಪಂಚಾಯತ್‌ಗೆ ಒಂದು ವಿವೇಕಾನಂದ ಸ್ವಸಹಾಯ ಸಂಘವನ್ನು ರಚಿಸಲು ಪ್ರಸ್ತಾಪಿಸಲಾಗಿತ್ತು. ಈಗ ಪ್ರತಿ ಪಂಚಾಯಿತಿಯಲ್ಲಿ ಎರಡು ಗುಂಪುಗಳನ್ನು ಹೊಂದಲು ಹಣಕಾಸು ಇಲಾಖೆ ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯಾದ್ಯಂತ ಇಂತಹ 12,000 ಗುಂಪುಗಳಾಗಲಿವೆ.
ಇದನ್ನೂ ಓದಿ: ಮತ ಚಲಾಯಿಸುವಂತೆ ನಗರದ ಮತದಾರರು, ಯುವಕರನ್ನು ಪ್ರೇರೇಪಿಸಬೇಕು: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್
ಯುವಕರಿಗೆ ಉದ್ಯೋಗ ನೀಡುವ ಗುರಿ: ಈ ಯೋಜನೆಯು ಯುವಕರಿಗೆ ಉದ್ಯೋಗ ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ ಇಲಾಖೆಯು 1 ಲಕ್ಷ ರೂಪಾಯಿ ಸಹಾಯಧನ ಸೇರಿದಂತೆ. 10 ಸಾವಿರ ರೂಪಾಯಿ ನಗದು ಮತ್ತು 5 ಲಕ್ಷ ರೂಪಾಯಿ ಸಾಲವನ್ನು ನೀಡುತ್ತದೆ. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಸಚಿವ ಕೆ ಸಿ ನಾರಾಯಣಗೌಡ, ಐದು ಲಕ್ಷ ಯುವಕರಿಗೆ ಉದ್ಯೋಗ ಸಿಗಲಿದೆ. “ನಾವು ಈ ಯೋಜನೆಯ ಮೂಲಕ ಯುವ ಸಬಲೀಕರಣದತ್ತ ಗಮನಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ 28 ಸಾವಿರ ಸ್ವಸಹಾಯ ಸಂಘಗಳನ್ನು ರಚಿಸುವ ಗುರಿ ಹೊಂದಿದ್ದೇವೆ ಎಂದರು.
ಕರ್ನಾಟಕದ ಶೇಕಡಾ 60 ಕ್ಕಿಂತ ಹೆಚ್ಚು ಜನಸಂಖ್ಯೆಯು ಗ್ರಾಮೀಣ ಪ್ರದೇಶದಲ್ಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಯುವಕರು ಜನಸಂಖ್ಯೆಯ ಪ್ರಮುಖ ಭಾಗವಾಗಿದೆ. ಅವರು ಕೆಲಸ ಹುಡುಕಿಕೊಂಡು ನಗರ ಪ್ರದೇಶಗಳಿಗೆ ಹೋಗುತ್ತಾರೆ. ಈ ಯೋಜನೆಯು ಅವರಿಗೆ ಆಯಾ ಸ್ಥಳಗಳಲ್ಲಿ ಉದ್ಯೋಗಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ, ಹೀಗಾಗಿ ಅವರನ್ನು ಅವರ ಹಳ್ಳಿಗಳಲ್ಲಿ ಉಳಿಯುವಂತೆ ಮಾಡುತ್ತದೆ. ಸರ್ಕಾರವು ಐದು ಲಕ್ಷ ಯುವಕರನ್ನು ಗುರಿಯಾಗಿಸಿಕೊಳ್ಳುವ ಗುರಿಯನ್ನು ಹೊಂದಿದೆ, ಅಂದರೆ, ನಾವು ಐದು ಲಕ್ಷ ಕುಟುಂಬಗಳಿಗೆ ಪರೋಕ್ಷವಾಗಿ ತಲುಪುತ್ತಿದ್ದೇವೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.