ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಪ್ರಮುಖ ಆರೋಪಿ ಸ್ವಪ್ನಾ ಸುರೇಶ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

ಸ್ವಪ್ನಾ ಸುರೇಶ್ ಪರ ವಕೀಲ ಆರ್ ಕೃಷ್ಣ ರಾಜ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಇಮೇಲ್ ಮೂಲಕ ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದು, ಸಂಬಂಧ ಕೆಆರ್ ಪುರಂ ಪೊಲೀಸರು ಸ್ವಪ್ನಾ ಸುರೇಶ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಆರೋಪಿ ಸ್ವಪ್ನಾ ಸುರೇಶ್
ಆರೋಪಿ ಸ್ವಪ್ನಾ ಸುರೇಶ್

ಬೆಂಗಳೂರು: ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿರುವ 2020ರ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಪರ ವಕೀಲ ಆರ್ ಕೃಷ್ಣ ರಾಜ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಇಮೇಲ್ ಮೂಲಕ ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದು, ಸಂಬಂಧ ಕೆಆರ್ ಪುರಂ ಪೊಲೀಸರು ಸ್ವಪ್ನಾ ಸುರೇಶ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಕೆಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ವಪ್ನಾ ವಾಸವಾಗಿದ್ದಾರೆ. ಪೊಲೀಸರು ಆಕೆಯನ್ನು ವೈಟ್‌ಫೀಲ್ಡ್ ಬಳಿಯ ಹೋಟೆಲ್‌ಗೆ ಕರೆದೊಯ್ದು ವಿಚಾರಣೆ ನಡೆಸಿದ್ದು, ಅಲ್ಲಿ ಆಕೆಗೆ ಬೆದರಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

ಪೊಲೀಸರು ತಮ್ಮ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಕುರಿತು ಸ್ವಪ್ನಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟಪಡಿಸಿದ್ದಾರೆ. ಕೆಆರ್ ಪುರಂ ಪೊಲೀಸ್ ಠಾಣೆ ಹಾಗೂ ಹೋಟೆಲ್ ಮುಂದೆ ನಿಂತಿರುವ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ. ತನಿಖಾ ತಂಡದ ಮುಂದೆ ಹಾಜರಾಗುವಂತೆ ವಿಜೇಶ್ ಪಿಳ್ಳೈಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಚೇರಿ ಆದೇಶದ ಮೇರೆಗೆ ಕ್ರಮಕೈಗೊಂಡಿರುವುದಾಗಿ ಕೆಆರ್ ಪುರಂ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com