ಚಾಮರಾಜನಗರ: ಸರ್ಕಾರಿ ಗೌರವಗಳೊಂದಿಗೆ ಧ್ರುವ ನಾರಾಯಣ ಅಂತ್ಯಕ್ರಿಯೆ
ಹೃದಯಾಘಾತದಿಂದ ನಿನ್ನೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಹೆಗ್ಗವಾಡಿಯಲ್ಲಿ ಇಂದು ಮಧ್ಯಾಹ್ನ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.
Published: 12th March 2023 03:34 PM | Last Updated: 12th March 2023 06:36 PM | A+A A-

ಧ್ರುವ ನಾರಾಯಣ ಪಾರ್ಥಿವ ಶರೀರ
ಚಾಮರಾಜನಗರ: ಹೃದಯಾಘಾತದಿಂದ ನಿನ್ನೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಹೆಗ್ಗವಾಡಿಯಲ್ಲಿ ಇಂದು ಮಧ್ಯಾಹ್ನ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಇದಕ್ಕೂ ಮುನ್ನ ಅಗಲಿದ ನಾಯಕನಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ರಾಷ್ಟ್ರಗೀತೆ ಮೊಳಗಿಸಿ, ಒಂದು ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಮತ್ತಿತರ ಮುಖಂಡರು ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಚಾಮರಾಜನಗರದ ಹೆಗ್ಗವಾಡಿಯಲ್ಲಿ ನಡೆದ ಕಾಂಗ್ರೆಸ್ ಹಿರಿಯ ಮುಖಂಡರಾದ ಧ್ರುವನಾರಾಯಣ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರದಲ್ಲಿ ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ @siddaramaiah ಅವರು ಪಾಲ್ಗೊಂಡು ಅಂತಿಮ ಗೌರವ ಅರ್ಪಿಸಿದರು. pic.twitter.com/SXkBU0W4gU
— Karnataka Congress (@INCKarnataka) March 12, 2023
Congress farewell: Kpcc president @DKShivakumar , brother and MP @DK Suresh , MLA Chikkamadu and others carrying body of KPCC working president R Druvanarayan during funeral procession in Haggavadi, Chamrajnagar @santwana99 @XpressBengaluru pic.twitter.com/8bgAdXbDGd
— K Shiva Kumar (@ShivascribeTNIE) March 12, 2023
ಶನಿವಾರ ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಮೈಸೂರಿನ ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.