ಬೆಂಗಳೂರಿನ ಕಸ, ಸಂಚಾರ ದಟ್ಟಣೆ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ಕಳವಳ!

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ಅಸಮರ್ಪಕ ಕಸ ನಿರ್ವಹಣೆ ಕೇಂಗ್ರ ಸರ್ಕಾರದ ಗಮನವನ್ನು ಸೆಳೆದಿದ್ದು, ಸಮಸ್ಯೆಗಳ ಕುರಿತು ಕಳವಳ ವ್ಯಕ್ತಪಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ಅಸಮರ್ಪಕ ಕಸ ನಿರ್ವಹಣೆ ಕೇಂಗ್ರ ಸರ್ಕಾರದ ಗಮನವನ್ನು ಸೆಳೆದಿದ್ದು, ಸಮಸ್ಯೆಗಳ ಕುರಿತು ಕಳವಳ ವ್ಯಕ್ತಪಡಿಸಿದೆ.

ದೆಹಲಿಯಿಂದ ಬೆಂಗಳೂರಿಗೆ ಬಂದಿರುವ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ (MoHUA) ಅಧಿಕಾರಿಗಳು ನಗರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.

ಬೆಂಗಳೂರಿನಲ್ಲಿ ಸೋಮವಾರ ನಡೆದ ಸಭೆಯಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಮನೋಜ್ ಜೋಶಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಕುಮಾರ್ ನಾಯಕ್, ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಅಮೃತ್ ಯೋಜನೆ (Atal Mission for Rejuvenation and Urban Transformation - AMRUT), ಸ್ಮಾರ್ಟ್ ಸಿಟಿ ಕಾಮಗಾರಿಗಳು, ನಗರ ಯೋಜನೆ, ಸ್ವಚ್ಛ ಭಾರತ ಯೋಜನೆ ಮತ್ತು ನಮ್ಮ ಮೆಟ್ರೋ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಕುರಿತಂತೆಯೂ ಚರ್ಚೆಗಳು ನಡೆದವು ಎಂದು ಮೂಲಗಳು ತಿಳಿಸಿವೆ.

ಗುಣಮಟ್ಟ ಹದಗೆಟ್ಟಿರುವುದರಿಂದ ಘನತ್ಯಾಜ್ಯ ನಿರ್ವಹಣೆ ಕಾಮಗಾರಿಯಲ್ಲಿ ಸುಧಾರಣೆ ತರುವುದು ಅಗತ್ಯ ಎಂದು ಕೇಂದ್ರ ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರಿನಲ್ಲಿನ ಟ್ರಾಫಿಕ್ ಪರಿಸ್ಥಿತಿಯು ಕಳವಳಕಾರಿ ವಿಚಾರವಾಗಿದೆ. ನಗರದಲ್ಲಿ ಮೂಲಸೌಕರ್ಯ ಸುಧಾರಣೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ.

ಬಿಬಿಎಂಪಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕೈಗೊಳ್ಳುತ್ತಿರುವ ಪ್ರವಾಹ ನಿರ್ವಹಣೆ ಕಾರ್ಯಗಳು, ಇತರೆ ಮುಂದಿನ ಯೋಜನೆಗಳು ಮತ್ತು ತಂತ್ರಜ್ಞಾನದ ಬಳಕೆ ಕುರಿತಂತೆಯೂ ಕೇಂದ್ರ ಸರ್ಕಾರದ ಅಧಿಕಾರಿಗಳು ವಿವರವಾದ ಮಾಹಿತಿಗಳನ್ನು ಪಡೆದುಕೊಂಡರು.

ಪ್ರವಾಹವನ್ನು ತಗ್ಗಿಸಲು ಯಾವ ಯಾವ ಸ್ಥಳದಲ್ಲಿ ಯಾವ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂಬುದನ್ನು ಅಧಿಕಾರಿಗಳು ಕೇಂದ್ರಕ್ಕೆ ವಿವರಿಸಿದರು.

ಸ್ಮಾರ್ಟ್ ಸಿಟಿ ಪ್ರಗತಿಯ ಭಾಗವಾಗಿ ಸರ್ಕಾರ ರೂಪಿಸುತ್ತಿರುವ ವಿಶೇಷ ಯೋಜನೆಗಳನ್ನು ಸಚಿವಾಲಯದ ಅಧಿಕಾರಿಗಳಿಗೆ ವಿವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com