ಆಗಸ್ಟ್ 15ರೊಳಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ: ಸಿಎಂ ಬೊಮ್ಮಾಯಿ
ಆಗಸ್ಟ್.15ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.
Published: 15th March 2023 10:21 AM | Last Updated: 15th March 2023 08:00 PM | A+A A-

ತವರು ಕ್ಷೇತ್ರವಾದ ಶಿಗ್ಗಾಂವಿಯ ಕೋಣನಕೇರಿ ಸರ್ಕಾರಿ ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಹಾವೇರಿ: ಆಗಸ್ಟ್.15ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.
ಹಾವೇರಿ ಜಿಲ್ಲೆ ಸ್ವಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ ಕೋಣನಕೇರಿಯಲ್ಲಿ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿರು. ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವರಿಸಿ ಬೊಮ್ಮಾಯಿ ಅವರು ಮಾತನಾಡಿದರು.
ಇದನ್ನೂ ಓದಿ: ಕೊಪ್ಪಳದಲ್ಲಿ 100 ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ: ಸಿಎಂ ಬೊಮ್ಮಾಯಿ
ಶಿಗ್ಗಾಂವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿಯ ಬಜೆಟ್ ನಲ್ಲಿ ಹೊಸದಾಗಿ 10 ಪಿಯುಸಿ ಕಾಲೇಜು ಮಂಜೂರಾಗಿದ್ದು, ಈ ಕಾಲೇಜುಗಳಲ್ಲಿ ವಿಜ್ಞಾನ ವಿಷಯವನ್ನು ಕಡ್ಡಾಯಗೊಳಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 25,000 ಕ್ಕೂ ಹೆಚ್ಚು ತರಗತಿ ಕೊಠಡಿಗಳನ್ನು ನಿರ್ಮಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.