ಎಕ್ಸ್‌ಪ್ರೆಸ್‌ವೇ ರಸ್ತೆ ಕಿತ್ತುಬಂದಿಲ್ಲ, ನ್ಯೂನ್ಯತೆ ಸರಿಪಡಿಸಲಾಗುತ್ತಿದೆ ಎಂದ ಪ್ರತಾಪ್ ಸಿಂಹ, ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಸ್ತೆ ಕಿತ್ತುಬಂದಿಲ್ಲ, ನ್ಯೂನ್ಯತೆಯನ್ನು ಸರಿಪಡಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಪ್ರತಾಪ್ ಸಿಂಹ
ಪ್ರತಾಪ್ ಸಿಂಹ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಸ್ತೆ ಕಿತ್ತುಬಂದಿಲ್ಲ, ನ್ಯೂನ್ಯತೆಯನ್ನು ಸರಿಪಡಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಎಕ್ಸ್‌ಪ್ರೆಸ್‌ವೇ ರಸ್ತೆ ಕಿತ್ತುಬಂದಿದೆ ಎಂಬ ಸುದ್ದಿಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ರಸ್ತೆ ಕಿತ್ತು ಬಂದಿಲ್ಲ, ಎಕ್ಸ್‌ಪನ್ಶನ್‌ ಜಾಯಿಂಟ್‌ ಬಳಿ ಇದ್ದ ಸಣ್ಣ ನ್ಯೂನತೆಯನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರತಾಪ್ ಸಿಂಹ ಅವರ ಈ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಟೀಕಿಸಿದೆ. ಮಾನ್ಯ ಸಂಸದರೇ, ಯಾರ ಕಿವಿಡೆ ಹೂವು ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಎಂದು ಪ್ರಶ್ನೆಸಿದೆ.

ಅಂದಹಾಗೆ ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ? ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ? ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ? ಎಂದು ಪ್ರಶ್ನಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com