ಬುಧವಾರ ರಾಮದುರ್ಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.
ಬುಧವಾರ ರಾಮದುರ್ಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.

ಬೆಳಗಾವಿ: 11,600 ಜನರಿಗೆ ಹಕ್ಕುಪತ್ರ ವಿತರಿಸಿದ ಸಿಎಂ ಬೊಮ್ಮಾಯಿ

ಅನೇಕ ಕಾನೂನು ತೊಡಕುಗಳನ್ನು ಪರಿಹರಿಸಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ಕುರುಬರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದ್ದು, ಅದೇ ರೀತಿ ಕಾಡಂಚಿನಲ್ಲಿ ಹಾಗೂ ಖಾಸಗಿ ಜಾಗೆಯಲ್ಲಿ ಇರುವ ಜನರಿಗೂ ಹಕ್ಕುಪತ್ರವನ್ನು ನೀಡಲು ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಬುಧವಾರ ಹೇಳಿದರು.
Published on

ಬೆಳಗಾವಿ: ಅನೇಕ ಕಾನೂನು ತೊಡಕುಗಳನ್ನು ಪರಿಹರಿಸಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ಕುರುಬರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದ್ದು, ಅದೇ ರೀತಿ ಕಾಡಂಚಿನಲ್ಲಿ ಹಾಗೂ ಖಾಸಗಿ ಜಾಗೆಯಲ್ಲಿ ಇರುವ ಜನರಿಗೂ ಹಕ್ಕುಪತ್ರವನ್ನು ನೀಡಲು ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಬುಧವಾರ ಹೇಳಿದರು.

ರಾಮದುರ್ಗ ತಾಲ್ಲೂಕಿನ ಬಟಕುರ್ಕಿ ಗ್ರಾಮದಲ್ಲಿ ಬುಧವಾರ ನಡೆದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಹಕ್ಕುಪತ್ರ ವಿತರಣಾ ಸಮಾವೇಶ, ಅನುಷ್ಠಾನ ಹಾಗೂ ಅರಿವು ಕಾರ್ಯಕ್ರಮದಲ್ಲಿ ವಿವಿಧ ತಾಂಡಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಅನೇಕ ಕಾನೂನು ತೊಡಕುಗಳನ್ನು ಪರಿಹರಿಸಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ಕುರುಬರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದೆ. ಪ್ರಧಾನಮಂತ್ರಿಗಳು ಇತ್ತೀಚಿಗೆ ಕಲಬುರಗಿಯಲ್ಲಿ 50 ಸಾವಿರಕ್ಕೂ ಅಧಿಕ ಜನರಿಗೆ ಹಕ್ಕುಪತ್ರ ನೀಡಿದ್ದು, ಇನ್ನು ಕೆಲವೇ ದಿನಗಳಲ್ಲಿ ದಾವಣಗೆರೆಯಲ್ಲಿ ಇನ್ನೂ 50 ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ಹೇಳಿದರು.

ಸಮಾಜದಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳುವಾಗ ಏನೇ ಗೊಂದಲ ಎದುರಾದರೂ ಸಮಾಜದ ಕಟ್ಟಕಡೆಯ ಜನರ ಕಣ್ಣೀರು ನೋಡಿ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು. ಅಂತಹ ನಿರ್ಧಾರ ತೆಗೆದುಕೊಂಡಿದ್ದೇನೆ. ಸರಕಾರಿ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವುದರ ಜೊತೆಗೆ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮಲಪ್ರಭೆ ನದಿತೀರದಲ್ಲಿ ಪ್ರವಾಹಹಾನಿ ತಪ್ಪಿಸಲು 125 ಕೋಟಿ ರೂಪಾಯಿ ವೆಚ್ಚದಲ್ಲಿ ರಕ್ಷಣಾ ಗೋಡೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ.

ಬೆಳೆಹಾನಿ ಪರಿಹಾರವಾಗಿ ಕೇಂದ್ರ ಸರಕಾರ ನೀಡುವ ಪರಿಹಾರಧನದ ಎರಡು ಪಟ್ಟು ಪರಿಹಾರವನ್ನು ರಾಜ್ಯ ಸರಕಾರ ನೀಡಿರುವುದು ದೇಶದಲ್ಲೇ ಮೊದಲು. ಇದು ನಮ್ಮ ಸರಕಾರದ ಬದ್ಧತೆಯಾಗಿದೆ. ಹಿಂದಿನಂತೆ ಬಾಯಿಮಾತಿನಲ್ಲಿ ಪರಿಹಾರ ನೀಡುವ ಸರಕಾರ ಇದಲ್ಲ; ಪ್ರತಿಯೊಂದು ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಮೂಲಕ ಜನರ ಸಮಸ್ಯೆಗಳ ನಿವಾರಣೆಗೆ ಶ್ರಮಿಸಲಾಗಿದೆ ಎಂದು ತಿಳಿಸಿದರು.

ಪಿಎಂ-ಕಿಸಾನ್ ಯೋಜನೆಯಡಿ 5.61 ಲಕ್ಷ ರೈತರ ಖಾತೆಗೆ 1130 ಕೋಟಿ ಹಣವನ್ನು ಜಮೆ ಮಾಡಲಾಗಿದೆ. ಸ್ವತಃ ಮಾನ್ಯ ಪ್ರಧಾನಮಂತ್ರಿಗಳು ನೇರವಾಗಿ ರೈತರ ಖಾತೆಗೆ ಹಣ ಜಮೆ ಮಾಡಿದ್ದಾರೆ. ಜಲಜೀವನ ಮಿಷನ್ ಯೋಜನೆಯಡಿ ದೇಶದ 12 ಕೋಟಿ ಮನೆಗಳಿಗೆ ಹಾಗೂ ರಾಜ್ಯದಲ್ಲಿ ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರು ಒದಗಿಸಲಾಗಿದೆ. ಇನ್ನೂ 25 ಲಕ್ಷ ಮನೆಗಳಿಗೆ ನಳದ ಮೂಲಕ ಕುಡಿಯುವ ನೀರು ಒದಗಿಸುವ ಗುರಿ ಹೊಂದಲಾಗಿದೆ. ಗ್ಯಾಸ್ ಸಂಪರ್ಕ, ವಿದ್ಯುತ್ ಸೇರಿದಂತೆ ಒಂದು ಕುಟುಂಬಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ನೀಡಿವೆ ಎಂದರು.

13 ಲಕ್ಷ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯ ಲಾಭ ದೊರೆತಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಯ ಒಂದು ಲಕ್ಷಕ್ಕೂ ಅಧಿಕ ರೈತರ ಮಕ್ಕಳಿಗೆ ಈ ಯೋಜನೆಯ ಲಾಭ ಲಭಿಸಿದೆ ಎಂದು ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಡಿಸಿ ನಿತೇಶ್ ಪಾಟೀಲ್, ಆದಿ-ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಭೋಯಾರ್, ಎಸ್ಪಿ ಡಾ.ಸಂಜೀವ್ ಪಾಟೀಲ್ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com