ತರಾತುರಿಯಲ್ಲಿ ಪಂಚಮಸಾಲಿ-ಲಿಂಗಾಯತರ ಬೇಡಿಕೆ ಕುರಿತ ವರದಿ ಸಲ್ಲಿಕೆ ಸಾಧ್ಯವಿಲ್ಲ: ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ 

ಪಂಚಮಸಾಲಿ-ಲಿಂಗಾಯತರ ಬೇಡಿಕೆಯಾಗಿರುವ 2ಎ  ಮೀಸಲಾತಿ ಬೇಡಿಕೆ ಕುರಿತು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ಮಾಡದೆ ತರಾತುರಿಯಲ್ಲಿ ವರದಿ ಸಲ್ಲಿಸಲು ಸಾಧ್ಯವಿಲ್ಲ- ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ
ಪಂಚಮಸಾಲಿ ಮೀಸಲಾತಿ ಹೋರಾಟ
ಪಂಚಮಸಾಲಿ ಮೀಸಲಾತಿ ಹೋರಾಟ

ಪಂಚಮಸಾಲಿ-ಲಿಂಗಾಯತರ ಬೇಡಿಕೆಯಾಗಿರುವ 2ಎ ಮೀಸಲಾತಿ ಬೇಡಿಕೆ ಕುರಿತು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ಮಾಡದೆ ತರಾತುರಿಯಲ್ಲಿ ವರದಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. 

“ಸರಕಾರಕ್ಕೆ ಈಗಾಗಲೇ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಪೂರ್ಣ ವರದಿ ಇನ್ನಷ್ಟೇ ಸಲ್ಲಿಕೆಯಾಗಬೇಕಿದೆ. ನಿಯಮಾವಳಿಗಳ ಪ್ರಕಾರ ಆಯೋಗವು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ವಿವಿಧ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಹಿನ್ನೆಲೆಯನ್ನು ಅಧ್ಯಯನ ಮಾಡಿ, ಮಾಹಿತಿ ಸಂಗ್ರಹಿಸಿ ಸಂಪೂರ್ಣ ಪರಿಶೀಲನೆಯ ನಂತರ ವರದಿ ಸಲ್ಲಿಸಲಾಗುತ್ತದೆ'' ಎಂದು ಆಯೋಗದ ಅಧ್ಯಕ್ಷರು ಮಾಧ್ಯಮಗಳಿಗೆ ತಿಳಿಸಿದರು.

ವೀರಶೈವ ಪಂಚಮಸಾಲಿ ಸಮಾಜದ ವಿವಿಧ ಸಂಘಗಳ ಮನವಿಗಳಲ್ಲದೆ, ಇತರೆ ಹಿಂದುಳಿದ ಸಮುದಾಯಗಳ ಮನವಿಗಳಿಗೆ ಸ್ಪಂದಿಸಿದ ಆಯೋಗ ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ನಡೆಸಲು ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿದೆ. ವಿವಿಧ ಸರ್ಕಾರಿ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳಿಂದಲೂ ಮಾಹಿತಿಯನ್ನು ಸಂಗ್ರಹಿಸಿದೆ ಮತ್ತು ವರದಿಯನ್ನು ಸಿದ್ಧಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅದೇ ರೀತಿ ರಾಜ್ಯದ ಒಕ್ಕಲಿಗ ಸಮುದಾಯದ ಕೇಂದ್ರೀಯ ಸಂಘವು ಹಾಲಿ ಇರುವ ಮೀಸಲಾತಿಯನ್ನು ಹೆಚ್ಚಿಸುವಂತೆ ಕೋರಿರುವ ಮನವಿಯನ್ನು ಪರಿಶೀಲಿಸುವ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ ಎಂದರು.

ಈ ಹಿಂದೆ ಇದ್ದ ಎಚ್ ಕಾಂತರಾಜು ಅವರ ಸಾಮಾಜಿಕ-ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿಯ ಅನುಷ್ಠಾನದ ಕುರಿತು ಸ್ಪಷ್ಟನೆ ನೀಡಿರುವ ಕೆ.ಜಯಪ್ರಕಾಶ ಹೆಗಡೆ, ಆಗಿನ ಸದಸ್ಯ ಕಾರ್ಯದರ್ಶಿ ವರದಿಗೆ ಸಹಿ ಮಾಡಿಲ್ಲ ಆದ್ದರಿಂದ ಸರ್ಕಾರ ಅದನ್ನು ಸ್ವೀಕರಿಸಲಿಲ್ಲ ಎಂದು ಹೆಗ್ಡೆ ಸ್ಪಷ್ಟಪಡಿಸಿದರು. "ಈಗ, ಆಯೋಗ ಪತ್ರವನ್ನು ಬರೆದು, ಹೊಸ ವರದಿಯನ್ನು ಸಿದ್ಧಪಡಿಸಬೇಕೆ ಎಂದು ಕೇಳಿದೆ, ಇದು ಸರ್ಕಾರದ ನಿರ್ಧಾರವನ್ನು ಅವಲಂಬಿಸಿರುತ್ತದೆ" ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com