ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್‌ ನಲ್ಲಿ ಗ್ಯಾಸ್ ಪೈಪ್‌ಲೈನ್ ಸೋರಿಕೆ; ಮೂವರಿಗೆ ಗಾಯ

ಗುರುವಾರ ಬೆಳಗ್ಗೆ ಎಚ್‌ಎಸ್‌ಆರ್ ಲೇಔಟ್‌ 7ನೇ ಸೆಕ್ಟರ್ ನಲ್ಲಿ ಗ್ಯಾಸ್ ಪೈಪ್‌ಲೈನ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರಿಗೆ ಸುಟ್ಟ ಗಾಯಗಳಾಗಿದ್ದು, ಎರಡು ಮನೆಗಳಿಗೆ ಹಾನಿಯಾಗಿದೆ.
ಗ್ಯಾಸ್ ಪೈಪ್ ಲೈನೇ ಸೋರಿಕೆ
ಗ್ಯಾಸ್ ಪೈಪ್ ಲೈನೇ ಸೋರಿಕೆ

ಬೆಂಗಳೂರು: ಗುರುವಾರ ಬೆಳಗ್ಗೆ ಎಚ್‌ಎಸ್‌ಆರ್ ಲೇಔಟ್‌ 7ನೇ ಸೆಕ್ಟರ್ ನಲ್ಲಿ ಗ್ಯಾಸ್ ಪೈಪ್‌ಲೈನ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರಿಗೆ ಸುಟ್ಟ ಗಾಯಗಳಾಗಿದ್ದು, ಎರಡು ಮನೆಗಳಿಗೆ ಹಾನಿಯಾಗಿದೆ.

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನ ಗ್ಯಾಸ್ ಪೈಪ್‌ಲೈನ್ ನಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ನಡೆಸಿದ ಒಳಚರಂಡಿ ಕಾಮಗಾರಿಯ ಸಮಯದಲ್ಲಿ ಹಾನಿಗೊಳಗಾಗಿದೆ ಎಂದು ಹೇಳಲಾಗಿದೆ.

ಪೈಪ್‌ಲೈನ್‌ನಿಂದ ಅನಿಲ ಸೋರಿಕೆ ಆರಂಭವಾದಾಗ ಅಧಿಕಾರಿಗಳ ಗಮನಕ್ಕೆ ತರುವ ಬದಲು  ಕಾರ್ಮಿಕರು ಹಾನಿಗೊಳಗಾದ ಭಾಗದ ಮೇಲೆ ಮಣ್ಣು ಮುಚ್ಚಿದರು. ಆದರೆ ಇದರಿಂದ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲ, ಹೀಗಾಗಿ ಕೆಲಸದ ಸ್ಥಳದ ಸಮೀಪವಿರುವ ಮನೆಯ ಅಡುಗೆಮನೆಗೆ ಅನಿಲ ಹರಡಿತು.

ಸ್ಫೋಟ ಸಂಭವಿಸಿದಾಗ ಅಡುಗೆ ಮಾಡುತ್ತಿದ್ದ ಮಹಿಳೆಗೆ ಶೇ 25ರಷ್ಟು ಸುಟ್ಟ ಗಾಯಗಳಾಗಿವೆ. ಪಕ್ಕದ ಮನೆಗೂ ಬೆಂಕಿ ಹೊತ್ತಿಕೊಂಡಿದ್ದು, ಅಡುಗೆ ಮಾಡುತ್ತಿದ್ದ ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರು ಮಹಿಳೆಯರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅವರ ಮನೆಗಳಿಗೂ ಹಾನಿಯಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಚರಂಡಿ ಕಾಮಗಾರಿ ನಡೆಸುತ್ತಿದ್ದ ಗುತ್ತಿಗೆದಾರನ ವಿರುದ್ಧ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು BWSSB ಮುಖ್ಯ ಇಂಜಿನಿಯರ್ ವೆಂಕಟೇಶ್  ತಿಳಿಸಿದ್ದಾರೆ. ಮ್ಯಾನ್‌ಹೋಲ್‌ನ ಮುಚ್ಚಳದ ಕೆಳಗೆ ಗ್ಯಾಸ್ ಪೈಪ್‌ಲೈನ್  ಹೇಗೆ ನಿರ್ಮಿಸಲಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇಲ್ಲಿ ಕೊಳಚೆ ನೀರು ನಿಲ್ಲುತ್ತಿರುವ ಬಗ್ಗೆ ದೂರು ನೀಡಿದಾಗ ನಮ್ಮ ಗುತ್ತಿಗೆದಾರರು ಅದನ್ನು ಸರಿ ಮಾಡಲು ಬಂದಿದ್ದರು. ಈ ಜಾಗದಲ್ಲಿ ಸಂಪೂರ್ಣ  ಕತ್ತಲು ಆವೃತ್ತಾವಾಗಿದೆ,  ಅರ್ಧ ಇಂಚು ವ್ಯಾಸದ ಈ ಸಣ್ಣ ಪೈಪ್ ಅನ್ನು ಇಲ್ಲಿ ಯಾರೂ ನೋಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com