ಎಎಸ್ಐ ನಿಯಮ ಉಲ್ಲಂಘಿಸುತ್ತಿರುವ ಪ್ರವಾಸಿಗರು: ಹಂಪಿಯಲ್ಲಿ 50 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಲು ಅಧಿಕಾರಿಗಳು ಮುಂದು!

ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲು ವಿಜಯನಗರ ಜಿಲ್ಲಾಡಳಿತ ಮತ್ತು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಮುಂದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೊಸಪೇಟೆ: ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲು ವಿಜಯನಗರ ಜಿಲ್ಲಾಡಳಿತ ಮತ್ತು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಮುಂದಾಗಿದೆ. ಇದರಂತೆ ಹಂಪಿಯಲ್ಲಿ ಹೆಚ್ಚುವರಿಯಾಗಿ 50 ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಹಂಪಿಯಲ್ಲಿ ಮಾರ್ಗಸೂಚಿಗಳು ಉಲ್ಲಂಘನೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದ ಯುನೆಸ್ಕೋ ತಂಡವು ಕಳೆದ ವಾರ ಎಎಸ್ಐ ಅಧಿಕಾರಿಗಳಿಂದ ವರದಿ ಕೇಳಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಂಪಿಯಲ್ಲಿ ಭದ್ರತೆ ಹೆಚ್ಚಿಸಲು ಮುಂದಾಗಿದ್ದಾರೆ.

ಹಂಪಿಯಲ್ಲಿ ಈಗಾಗಲೇ 120 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 100 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ

ಇದರ ಜೊತೆಗೆ ಕೆಲವು ಆಯ್ದ ಸ್ಥಳಗಳಲ್ಲಿ 50 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಚಿಂತನೆಗಳು ನಡೆಯುತ್ತಿವೆ. ಕೆಲವು ಕ್ಯಾಮೆರಾಗಳು ಹಾನಿಗೊಳಗಾಗಿದ್ದು, ದುರಸ್ತಿಯ ಅಗತ್ಯವಿದೆ. ಒಂದು ವೇಳೆ ಹೊಸ ಸಿಸಿಟಿವಿ ಕ್ಯಾಮೆರಾಗಳು ಅಳವಡಿಸುವ ಅಗತ್ಯಬಿದ್ದಲ್ಲಿ ಅದನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಹೈಟೆಕ್ ಕ್ಯಾಮೆರಾಗಳಾಗಿವೆ. ವಿಜಯವಿಟ್ಟಲ ದೇವಾಲಯ ಸಂಕೀರ್ಣ, ವಿರೂಪಾಕ್ಷ ದೇವಾಲಯ, ಹೇಮ ಕೂಟ ಬೆಟ್ಟಗಳಂತಹ ಪ್ರಮುಖ ತಾಣಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದೀಗ ಹೆಚ್ಚೆಚ್ಚು ಜನರು ಸೇರರುವ ಪ್ರದೇಶಗಳನ್ನ ಆಯ್ಕೆ ಮಾಡಿಕೊಂಡು ಅಲ್ಲಿ ಸಿಸಿಟಿವಿ ಹಾಗೂ ಭದ್ರತೆಗಳನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಒಳಪಡಿಸಲಾಗುತ್ತದೆ. ಜನಸಂದಣಿ ಎಷ್ಟು ದೊಡ್ಡದಾಗಿದೆ ಎಂಬುದರ ಆಧಾರದ ಮೇಲೆ ಪಾಯಿಂಟ್‌ಗಳನ್ನು ಆಯ್ಕೆ ಮಾಡಲಾಗುತ್ತದೆ. ನಾವು ಸಹ ಕವರ್ ಮಾಡುತ್ತೇವೆ. ಹಂಪಿಯಲ್ಲಿ ಕೆಲವು ಏಕಾಂತ ತಾಣಗಳಿಗೆ ಕೆಲವರು ಭೇಟಿ ನೀಡುತ್ತಾರೆ" ಎಂದು ಅಧಿಕಾರಿ ಸೇರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com