ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆ: ಸಿಎಂ ಬೊಮ್ಮಾಯಿ ಅನಾವರಣ
ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.
Published: 18th March 2023 08:11 PM | Last Updated: 18th March 2023 08:11 PM | A+A A-

ನೂತನ ಮಹದೇಶ್ವರ ಪ್ರತಿಮೆ
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಚಾಮರಾಜನಗರ ಜಿಲ್ಲೆ ಧಾರ್ಮಿಕ ಹಾಗೂ ಜನಪದೀಯವಾಗಿ ಸಮೃದ್ಧವಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಾದ ಸಹಕಾರ ನೀಡಲಾಗುವುದು, ರೈತರಿಗೆ ಅರಿಶಿನಕ್ಕೆ ಶೀಘ್ರದಲ್ಲಿಯೇ ಬೆಂಬಲ ಬೆಲೆ ನೀಡಲಾಗುವುದು, ಚಂಗಡಿ ಗ್ರಾಮ ಸ್ಥಳಾಂತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಖ್ಯಮಂತ್ರಿ @BSBommai ಅವರು ಇಂದು 108 ಅಡಿ ಎತ್ತರದ ಮಲೆ ಮಹದೇಶ್ವರ ಪ್ರತಿಮೆ ಅನಾವರಣಗೊಳಿಸಿ, ಬೆಳ್ಳಿ ರಥ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.
1/2 pic.twitter.com/p9jkt3Zo8Q— CM of Karnataka (@CMofKarnataka) March 18, 2023
ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಎನ್, ಮಹೇಶ್ ಹಾಗೂ ವಿವಿಧ ಮಠಾಧೀಶರು ಸಮಾರಂಭದಲ್ಲಿ ಉಪಸ್ಥಿತರಿದ್ದರು.