
ಅಪಘಾತದ ದೃಶ್ಯ
ನೆಲಮಂಗಲ/ಮಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಗಳೂರಿನ ನಂತೂರು ಸರ್ಕಲ್ ನಲ್ಲಿ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 67 ವರ್ಷದ ಸ್ಯಾಮ್ಯುಯೆಲ್ ಜೇಸುದಾಸ್ ಹಾಗೂ 30 ವರ್ಷದ ಯುವತಿ ಮೃತಪಟ್ಟಿದ್ದಾರೆ. ಕದ್ರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಲಾರಿ ಚಾಲಕನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಮತ್ತೊಂದೆಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರಿನ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಬಸ್ ವೊಂದು ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ 34 ವರ್ಷದ ಶಂಕರ್ ಮತ್ತು 32 ವರ್ಷದ ವಿಲ್ಸನ್ ಗಲ್ಬಟ್ ಮೃತಪಟ್ಟಿದ್ದು 35 ವರ್ಷದ ಶ್ರೀನಿವಾಸ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ.