ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಮತ್ತೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Published: 18th March 2023 11:38 AM | Last Updated: 18th March 2023 11:38 AM | A+A A-

ಸಾಂದರ್ಭಿಕ ಚಿತ್ರ
ಕಲಬುರಗಿ: ಆಘಾತಕಾರಿ ಘಟನೆಯೊಂದರಲ್ಲಿ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಯನ್ನು ಮತ್ತೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿಯನ್ನು ಮೆಹಬೂಬ್ ಪಾಷಾ ಎಂದು ಗುರುತಿಸಲಾಗಿದೆ. ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಜಿಮ್ಸ್) ಈ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ 11 ಗಂಟೆಗೆ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ವಾರ್ಡ್‌ಗೆ ನುಗ್ಗಿದ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಆತನನ್ನು ಹಿಡಿದು ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಮಾಜಿ ಪ್ರೇಯಸಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!
ಸಂಸ್ತಸ್ತೆ ಕಳೆದ ಏಳು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ರಹ್ಮಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.