ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಜಲಾವೃತ ಸಮಸ್ಯೆಯನ್ನು ಎನ್'ಹೆಚ್ಎಐ ಪರಿಹರಿಸುತ್ತದೆ: ಸಿಎಂ ಬೊಮ್ಮಾಯಿ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಅಂಡರ್‌ಪಾಸ್‌ ಜಲಾವೃತಗೊಂಡಿರುವ ಸಮಸ್ಯೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪರಿಹರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಚಾಮರಾಜನಗರ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಅಂಡರ್‌ಪಾಸ್‌ ಜಲಾವೃತಗೊಂಡಿರುವ ಸಮಸ್ಯೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪರಿಹರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ (ಎಂಎಂ ಹಿಲ್ಸ್) ಹೆಲಿಪ್ಯಾಡ್‌ನಲ್ಲಿ ಮುಖ್ಯಮಂತ್ರಿಗಳು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮಳೆಯಿಂದಾಗಿ ಸಣ್ಣಪುಟ್ಟ ಸಮಸ್ಯೆಗಳು ಉಂಟಾಗುವುದು ಸಹಜ. ಈ ಸಮಸ್ಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಹರಿಸುತ್ತದೆ ಎಂದು ಹೇಳಿದರು.

ಬಳಿಕ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ನೌಕರರ ಮುಷ್ಕರದ ಮಾತನಾಡಿದ ಅವರು, "ಅವರ ವೇತನವನ್ನು ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ, ಇನ್ನೆರಡು ದಿನಗಳಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತಾರೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com