ಶಿವಾಜಿನಗರ: ಶಾಸಕ ರಿಜ್ವಾನ್ ಅರ್ಷದ್ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು, ಬೆಂಕಿ ಹಚ್ಚಿದ ಮಹಿಳೆಯರು!

ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದರು, ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದಾರೆ.
ರಿಜ್ವಾನ್ ಅರ್ಷದ್
ರಿಜ್ವಾನ್ ಅರ್ಷದ್

ಬೆಂಗಳೂರು: ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದರು, ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದಾರೆ.

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಫರೀದಾ ಅಹಮದ್ ಒಡೆತನದ ಗೋದಾಮಿನ ಮೇಲೆ ದಾಳಿ ನಡೆಸಿ ಸಾವಿರಾರು ಪಡಿತರ ಕಿಟ್‌ಗಳನ್ನು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಶಿವಾಜಿನಗರದಲ್ಲಿ ಶಾಸಕರ ವಿರುದ್ಧ ಭಾನುವಾರ ಪ್ರತಿಭಟನೆ ನಡೆಸಿದರು.

ಚುನಾವಣಾ ಕಾರಣಕ್ಕಾಗಿ ಮಾಜಿ ಕಾರ್ಪೊರೇಟರ್ ರಂಜಾನ್ ಸಮಯದಲ್ಲಿ ವಿತರಿಸುವ ಪಡಿತರ ಕಿಟ್‌ಗಳನ್ನು ತಡೆಯುವ ಮಾರ್ಗವಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ. 20 ವರ್ಷಗಳಿಂದ ಮಹಿಳೆಯರಿಗೆ ಹಬ್ಬ ಹರಿದಿನಗಳಲ್ಲಿ ಪಡಿತರ ಕಿಟ್ ವಿತರಿಸಲಾಗುತ್ತಿತ್ತು.

ರಂಜಾನ್ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಮಹಿಳೆಯರಿಗೆ ಈ ಪಡಿತರ ಕಿಟ್‌ಗಳನ್ನು ವಿತರಿಸಲಾಗುತ್ತದೆ.  ಶನಿವಾರ ರಾತ್ರಿ ನಡೆದ ದಾಳಿಯಿಂದಾಗಿ, ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ರಂಜಾನ್ ಸಮಯದಲ್ಲಿ ಪಡಿತರ ಕಿಟ್‌ಗಳನ್ನು ವಿತರಿಸಲಾಗುವುದಿಲ್ಲ ಎಂದು  ಮಹಿಳೆಯರು ಶಾಸಕರ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಶಕೀಲ್ ಉಸ್ಮಾನಿ ಹೇಳಿದ್ದಾರೆ. ಹಲವಾರು ಮಹಿಳೆಯರು ಶಾಸಕರ ಪ್ರತಿಮೆಗೆ ಥಳಿಸಿ, ತಮ್ಮ ಚಪ್ಪಲಿಯಿಂದ ಹೊಡೆದರು. ಇದರ ಬೆನ್ನಲ್ಲೇ ಮಹಿಳೆಯರು ಪ್ರತಿಕೃತಿಗೆ ಬೆಂಕಿ ಹಚ್ಚಿದರು.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಶಾಸಕ ರಿಜ್ವಾನ್ ಅರ್ಷದ್ ಪ್ರತಿಭಟನೆಯನ್ನು ಸಂಪೂರ್ಣವಾಗಿ ರಾಜಕೀಯ ಎಂದು ಹೇಳಿದ್ದಾರೆ. ದಾಳಿಯ ಹಿಂದಿನ ಉದ್ದೇಶವು ರಾಜಕೀಯವಾಗಿದೆ, ಪ್ರತಿಭಟನೆಯು ರಾಜಕೀಯವಾಗಿ ಮಾರ್ಪಟ್ಟಿದೆ.  ಶನಿವಾರದಂದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ನನಗೆ ಇವತ್ತಿನವರೆಗೂ ದಾಳಿ ನಡೆದಿರುವುದು ಗೊತ್ತಿರಲಿಲ್ಲಎಂದು ಶಾಸಕ ರಿಜ್ವಾನ್ ಅರ್ಷದ್ ಸ್ಪಷ್ಟ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com