SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು KSRTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರೀಕ್ಷೆ ಬರೆಯಲಿರುವ SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ದಿನ ವಿದ್ಯಾರ್ಥಿಗಳು KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
Published: 21st March 2023 11:03 PM | Last Updated: 21st March 2023 11:03 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರೀಕ್ಷೆ ಬರೆಯಲಿರುವ SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ದಿನ ವಿದ್ಯಾರ್ಥಿಗಳು KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಹೌದು.. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದ್ದು, ಅಂತಿಮ ಪರೀಕ್ಷೆಗಳು ಮಾರ್ಚ್ 31ರಿಂದ ಆರಂಭವಾಗಲಿದ್ದು, ಏ.15ರವರೆಗೆ ನಡೆಯಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ‘ಪರೀಕ್ಷಾ ಪ್ರವೇಶ ಪತ್ರವನ್ನು’ ತೋರಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಪ್ರಯಾಣಿಸಬಹುದು ಎಂದು ನಿಗಮದ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ
ಚಾಲಕ ಹಾಗೂ ನಿರ್ವಾಹಕರಿಗೆ ಸಿಬ್ಬಂದಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಕೋರಿದ್ದನ್ನು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು KSRTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ pic.twitter.com/B5tQkTK60i
— KSRTC (@KSRTC_Journeys) March 21, 2023
ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ಅಥವಾ ಪ್ರವೇಶ ಪತ್ರವನ್ನು ಸಾರಿಗೆ ಸಿಬ್ಬಂದಿಗಳಿಗೆ ತೋರಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅಂತೆಯೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ವಿದ್ಯಾರ್ಥಿಗಳ ಪ್ರವೇಶ ಪತ್ರದ ಆಧಾರದ ಮೇಲೆ ಬಸ್ ಪ್ರಯಾಣಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ ಹತ್ತಲು ಹಾಗೂ ಇಳಿಯಲು ಅನುಕೂಲ ಮಾಡಿಕೊಂಡುವಂತೆ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದು ನಿಗಮದ ನಿರ್ದೇಶಕರು ತಿಳಿಸಿದ್ದಾರೆ.