ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿ ತೆಕ್ಕೆಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ.
ಕಲಬುರಗಿಯ ಪ್ರಾದೇಶಿಕ ಆಯುಕ್ತ ಕೃಷ್ಣಾ ಬಾಜಪಯ್ಯೆ ಅವರು ನೂತನವಾಗಿ ಆಯ್ಕೆಯಾದ ಮೇಯರ್ ಮತ್ತು ಉಪಮೇಯರ್ ವಿಶಾಲ ದರ್ಗೆ ಮತ್ತು ಶಿವಾನಂದ ಪಿಸ್ಟೆ ಅವರನ್ನು ಅಭಿನಂದಿಸಿದರು.
ಕಲಬುರಗಿಯ ಪ್ರಾದೇಶಿಕ ಆಯುಕ್ತ ಕೃಷ್ಣಾ ಬಾಜಪಯ್ಯೆ ಅವರು ನೂತನವಾಗಿ ಆಯ್ಕೆಯಾದ ಮೇಯರ್ ಮತ್ತು ಉಪಮೇಯರ್ ವಿಶಾಲ ದರ್ಗೆ ಮತ್ತು ಶಿವಾನಂದ ಪಿಸ್ಟೆ ಅವರನ್ನು ಅಭಿನಂದಿಸಿದರು.

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ. 

ಇದೇ ಮೊದಲ ಬಾರಿಗೆ ಕಲಬುರಗಿಯಲ್ಲಿ ಬಿಜೆಪಿ ಸ್ವತಂತ್ರ್ಯವಾಗಿ ಗೆಲುವು ಸಾಧಿಸಿದೆ. ಮೇಯರ್ ಆಗಿ ಬಿಜೆಪಿಯ ವಿಶಾಲ್ ದರ್ಗಿ ಅವರು ಆಯ್ಕೆಯಾದರೆ ಉಪ ಮೇಯರ್ ಆಗಿ ಶಿವಾನಂದ್ ಪಿಸ್ತಿ ಆಯ್ಕೆಯಾಗಿದ್ದಾರೆ. ಈ ಮೂಲಕ 12 ವರ್ಷಗಳ ಬಳಿಕ ಬಿಜೆಪಿ ಕಲಬುರಗಿ ಪಾಲಿಕೆಯ ಗದ್ದುಗೆಗೇರಿದೆ.

ವಿಶಾಲ್ ದರ್ಗಿ 33 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಕಪನೂರ್ ಮತಗಳನ್ನು ಪಡೆದಿದ್ದಾರೆ. ಇನ್ನು ಉಪಮೇಯರ್ ಸ್ಥಾನಕ್ಕೆ ಬಿಜೆಪಿಯ ಶಿವಾನಂದ್ ಪಿಸ್ತಿ 33 ಮತಗಳನ್ನು ಪಡೆದರೆ ಕಾಂಗ್ರೆಸ್ ನ ವಿಜಯಲಕ್ಷ್ಮಿ 32 ಮತಗಳನ್ನು ಪಡೆದಿದ್ದಾರೆ. 

2021ರ ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿ ಪಾಲಿಕೆ ಚುನಾವಣೆ ನಡೆದಿತ್ತು. ಬಿಜೆಪಿ 23, ಕಾಂಗ್ರೆಸ್ 27, ಜೆಡಿಎಸ್ 4, ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. 

ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯೆಂದೇ ಪರಿಗಣಿತವಾಗಿದ್ದಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಇಂದು ಬಲವಾಗಿ ಬೇರೂರಿರುವ ಬಿಜೆಪಿ ಇದೀಗ ಕಲಬುರಗಿ ಮಹಾನಗರ ಪಾಲಿಕೆಯಲ್ಲೂ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಹಲವು ಹೈಡ್ರಾಮಾಗಳ ನಡುವೆಯೇ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವಿಶಾಲ್ ದರ್ಗಿ ಅವರು ಮೇಯರ್ ಆಗಿ ಮತ್ತು ಶಿವಾನಂದ್ ಪಿಸ್ತಿ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಚುನಾವಣೆಯಲ್ಲಿ ಇಬ್ಬರೂ ಕೇವಲ 1 ಮತದ ಅಂತರದಿಂದ ಜಯ ಗಳಿಸಿದ್ದು ವಿಶೇಷವಾಗಿದೆ. 

ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ವಿಶಾಲ್ ದರ್ಗಿ ಅವರು 33 ಮತಗಳನ್ನು ಪಡೆದರೆ ಅವರ ವಿರುದ್ಧ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಪ್ರಕಾಶ್ ಕಪನೂರು 32 ಮತಗಳನ್ನು ಪಡೆದರು. ಅದೇ ರೀತಿ ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಶಿವಾನಂದ್ 33 ಮತ ಪಡೆದರೆ ಕಾಂಗ್ರೆಸ್ ನ ವಿಜಯಲಕ್ಷ್ಮೀ 32 ಮತಗಳನ್ನು ಪಡೆದರು. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯ ಹೊರತಾಗಿಯೂ ಆಂತಿಮವಾಗಿ ಬಿಜೆಪಿ 1 ಮತದ ಅಂತರದಿಂದ ಸ್ವತಂತ್ರವಾಗಿ ಪಾಲಿಕೆಯ ಅಧಿಕಾರ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಯಿತು. 

ಕಾಂಗ್ರೆಸ್ ನ ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ಪಾಲಿಕೆ ಸದಸ್ಯ ಅಲೀಮ್ ಪಟೇಲ್ ಮತ ಕೇಂದ್ರಕ್ಕೆ ಬಾರದೇ ದೂರು ಉಳಿದರು. ಬಿಜೆಪಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಸಹ ಮತದಾನಕ್ಕೆ ಗೈರು ಹಾಜರಾದರು. ಪಾಲಿಕೆಗೆ ಆಯ್ಕೆಯಾದ ಸದಸ್ಯರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರು ಸೇರಿ ಒಟ್ಟು 65 ಮತದಾನದ ಅವಕಾಶವಿತ್ತು. 2021ರ ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿ ಪಾಲಿಕೆ ಚುನಾವಣೆ ನಡೆದಿತ್ತು. ಬಿಜೆಪಿ 23, ಕಾಂಗ್ರೆಸ್ 27, ಜೆಡಿಎಸ್ 4, ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. 

ಕಲಬುಗರಿ ಪಾಲಿಕೆಗೆ 2021ರಲ್ಲಿ ಚುನಾವಣೆ ನಡೆದು 27 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿಗೆ 23 ಮತ್ತು ಜೆಡಿಎಸ್ ಗೆ 4 ಸ್ಥಾನಗಳು ಲಭಿಸಿದ್ದವು. ಪಾಲಿಕೆ ಸದಸ್ಯರು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಲೋಕಸಭಾ ಸದಸ್ಯರು, ರಾಜ್ಯ ಸಭಾ ಸದಸ್ಯರು ಎಲ್ಲರೂ ಸೇರಿ ಒಟ್ಟು ಮತದಾರರ ಸಂಖ್ಯೆ 68 ಆಗಿದ್ದು ಬಹುಮತಕ್ಕೆ 35 ಸ್ಥಾನಗಳ ಅಗತ್ಯವಿತ್ತು. 

ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಜೆಡಿಎಸ್ ಸದಸ್ಯರಿಗೆ ವಿಪ್ ಜಾರಿಯಾಗಿದ್ದರಿಂದ ಸಂಸದರು ಮತ್ತು ಶಾಸಕರ ಮತಗಳು ನಿರ್ಣಾಯಕವಾಗಿದ್ದವು. ಗುರುವಾರ ಚುನಾವಣೆಗೆ ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮತ್ತು ಜೆಡಿಎಸ್ ಸದಸ್ಯ ಅಲೀಮ್ ಪಟೇಲ್ ಮತದಾನಕ್ಕೆ ಗೈರಾಗಿದ್ದರು. ಹೀಗಾಗಿ ಒಟ್ಟು ಸಂಖ್ಯಾ ಬಲ 65ಕ್ಕೆ ಕುಸಿಯಿತು. ಹೀಗಾಗಿ 33 ಮ್ಯಾಜಿಕ್ ನಂಬರ್ ಆಗಿ ಪರಿಗಣಿತವಾಯಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com