ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಸಿಎಂ ಬೊಮ್ಮಾಯಿಗೆ ಅವಮಾನ; ನಾಲಿಗೆ ಹರಿಬಿಟ್ಟ ಉದ್ಧವ್ ಠಾಕ್ರೆ ಬಣದ ಎಂಎಲ್‌ಸಿ ಡಾ. ಮನಿಷಾ
ಮಹಾರಾಷ್ಟ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಪಮಾನ ಮಾಡಲಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಎಂಎಲ್‌ಸಿ ಡಾ. ಮನಿಷಾ ಅವರು ಬೊಮ್ಮಾಯಿಯವರಿಗೆ ಅಪಮಾನ ಮಾಡಿದ್ದಾರೆ.
Published: 23rd March 2023 12:23 PM | Last Updated: 23rd March 2023 02:56 PM | A+A A-

ಸಿಎಂ ಬೊಮ್ಮಾಯಿ
ಬೆಳಗಾವಿ: ಮಹಾರಾಷ್ಟ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಪಮಾನ ಮಾಡಲಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಎಂಎಲ್‌ಸಿ ಡಾ. ಮನಿಷಾ ಅವರು ಬೊಮ್ಮಾಯಿಯವರಿಗೆ ಅಪಮಾನ ಮಾಡಿದ್ದಾರೆ.
ಕರ್ನಾಟಕ ಸರ್ಕಾರ ವಿರುದ್ಧ ಮನೀಷಾ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಮಾತನಾಡಿರುವ ಮನಿಷಾ ಕರ್ನಾಟಕ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿರಿಂದ ದಾದಾಗಿರಿ ಹೆಚ್ಚಿದೆ. ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಹಗುರವಾಗಿ ಮಾತನಾಡಿದ್ದಾರೆಂದು ತಿಳಿದುಬಂದಿದೆ.
ಕರ್ನಾಟಕದ ಗಡಿಭಾಗದಲ್ಲಿರುವ 865 ಹಳ್ಳಿಗಳಿಗೆ 54 ಕೋಟಿ ರೂ. ವೆಚ್ಚದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಯೋಜನೆ ಘೋಷಣೆ ಮಾಡಿದೆ. ಈ ಯೋಜನೆ ತಡೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಹೇಳಿದ್ದರು.
ಇದನ್ನೂ ಓದಿ: ಕರ್ನಾಟಕದ ಗಡಿ ಗ್ರಾಮಗಳಲ್ಲಿನ ಆರೋಗ್ಯ ಯೋಜನೆ ಆದೇಶ ಕೂಡಲೇ ಹಿಂಪಡೆಯಿರಿ: ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ
ಈ ಕುರಿತು ಮಹಾರಾಷ್ಟ್ರ ವಿಧಾನ ಪರಿಷತ್ ಕಲಾಪದಲ್ಲಿ ಚರ್ಚೆ ವೇಳೆ ಮಾತನಾಡಿರುವ ಎಂಎಲ್‌ಸಿ ಡಾ. ಮನಿಷಾ ಉದ್ಧಟತನ ಮೆರೆದಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿಯ ದಾದಾಗಿರಿ ಹೆಚ್ಚಾಗಿದೆ. ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಿ, ಮರಾಠಿ ಮಾತನಾಡಲು ಬಿಡುತ್ತಿಲ್ಲ. ಗಡಿಭಾಗದ 865 ಹಳ್ಳಿಗಳಿಗೆ ಕೇವಲ 54 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಯೋಜನೆ ನೀಡಲಾಗಿದೆ. ಉಭಯ ರಾಜ್ಯಗಳಲ್ಲಿ ಒಂದೇ ಪಕ್ಷದ ಸರ್ಕಾರ ಇದೆ. ನಾವು ನಮ್ಮ ಜನರಿಗೆ ಅನುದಾನ ನೀಡುತ್ತಿದ್ದೇವೆ. ಅದನ್ನು ಪ್ರಶ್ನೆ ಮಾಡಲು ಕರ್ನಾಟಕ ಸಿಎಂಗೆ ಎಷ್ಟು ಧೈರ್ಯ ಇದೆ? ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇನ್ನು ಬಾಕಿ ಇದೆ. ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ತಕ್ಕ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.