ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.
Published: 23rd March 2023 01:09 PM | Last Updated: 23rd March 2023 02:57 PM | A+A A-

ವಚನಾನಂದ ಸ್ವಾಮೀಜಿ
ಬೆಂಗಳೂರು: ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದಿದೆ ಎಂದರು.
2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನ ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ಮಧ್ಯಂತರ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ಇದನ್ನೂ ಓದಿ: ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲಾ ಇತಿಹಾಸವನ್ನು ಓದಲಿ: ಸಿಎಂ ಬೊಮ್ಮಾಯಿ
ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ನಲ್ಲಿನ ಪಿಐಎಲ್ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದು ಅವರು ಹೇಳಿದರು.
ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್ ಪಾಟೀಲ್ ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನು ಸಲ್ಲಿಸಿದ್ದೇವೆ. 1871 ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನು ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂದರ್ಭ ಬಂದೊದಗಿದೆ ಎಂದು ಹೇಳಿದರು.