ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳ ಬೆಂಬಲಿಸದಿರಲು ತಂಝೀಮ್ ನಿರ್ಣಯ, ಮಹಿಳೆಯರಿಂದ ಪ್ರತಿಭಟನೆ

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದಿಂದ ಮುಸ್ಲಿಂ ಅಭ್ಯರ್ಥಿಯನ್ನು ಬೆಂಬಲಿಸದೇ ಜಾತ್ಯತೀತ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ಭಟ್ಕಳ ತಂಝೀಮ್ ನಿರ್ಣಯ ಕೈಗೊಂಡಿದೆ ಎಂದು ತಿಳಿದುಬಂದಿದೆ.
ತಂಝೀಮ್ ಸಂಸ್ಥೆ ಕಚೇರಿ ಮುಂದೆ ಪ್ರತಿಭಟಿಸುತ್ತಿರುವ ಮುಸ್ಲಿಂ ಮಹಿಳೆಯರು.
ತಂಝೀಮ್ ಸಂಸ್ಥೆ ಕಚೇರಿ ಮುಂದೆ ಪ್ರತಿಭಟಿಸುತ್ತಿರುವ ಮುಸ್ಲಿಂ ಮಹಿಳೆಯರು.

ಭಟ್ಕಳ (ಉತ್ತರ ಕನ್ನಡ): ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದಿಂದ ಮುಸ್ಲಿಂ ಅಭ್ಯರ್ಥಿಯನ್ನು ಬೆಂಬಲಿಸದೇ ಜಾತ್ಯತೀತ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ಭಟ್ಕಳ ತಂಝೀಮ್ ನಿರ್ಣಯ ಕೈಗೊಂಡಿದೆ ಎಂದು ತಿಳಿದುಬಂದಿದೆ.

"ಸಮುದಾಯ ಸದಸ್ಯರ ಹಿತಾಸಕ್ತಿ ಮತ್ತು ಕೋಮುವಾದಿ ಶಕ್ತಿಗಳನ್ನು ದೂರವಿಡಲು" ಸಂಸ್ಥೆಯು  ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

"ಮಾರ್ಚ್ 20 ರಂದು ಸಭೆ ನಡೆದಿದ್ದು, ಕಳೆದ ಎರಡು ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತಂಝೀಮ್‌ನ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ನೇತೃತ್ವದಲ್ಲಿ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ.

ಈ ಬಾರಿಯ ಚುನಾವಣೆಯಲ್ಲಿ ಮತಗಳಲ್ಲಿ ಯಾವುದೇ ರೀತಿಯ ವಿಭಜನೆಯಾಗದಂತೆ ನೋಡಿಕೊಳ್ಳಲು ಜಾತ್ಯಾತೀತ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ಸಂಸ್ಥೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ತಂಝೀಮ್ ಸಂಸ್ಥೆಯ ಈ ನಿರ್ಧಾರವು ಆಮ್ ಆದ್ಮಿ ಪಕ್ಷ ಮತ್ತು ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಂತಹ ಪಕ್ಷಗಳಿಗೆ ಆಘಾತವನ್ನು ತಂದಿದೆ.

ಎಎಪಿ ಈಗಾಗಲೇ ಭಟ್ಕಳದಿಂದ ಮುಸ್ಲಿಂ ಅಭ್ಯರ್ಥಿಯನ್ನು ಘೋಷಿಸಿದ್ದು, ಎಸ್‌ಡಿಪಿಐ ಕೂಡ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿತ್ತು.

ಭಟ್ಕಳ-ಹೊನ್ನಾವರ ಕ್ಷೇತ್ರವು ಸುಮಾರು 50,000 ಮುಸ್ಲಿಮರು ಸೇರಿದಂತೆ 1.85 ಲಕ್ಷ ಜನಸಂಖ್ಯೆಯನ್ನು ಹೊಂದಿದೆ, ಇದರಲ್ಲಿ ನವ್ಯ ಮತ್ತು ದಕ್ಕಣಿ ಮುಸ್ಲಿಮರು ಸೇರಿದ್ದಾರೆ. ಸುಮಾರು 100 ಸಂಖ್ಯೆಯ ತಂಝೀಮ್ ಸದಸ್ಯರು ಆಯಾ ಪ್ರದೇಶದ ಮಸೀದಿಗಳಿಂದ ಚುನಾಯಿತರಾಗಿದ್ದಾರೆ. “ಸುಮಾರು 80 ಸದಸ್ಯರನ್ನು ಹೊಂದಿರುವ ಯಾವುದೇ ಮಸೀದಿಯು ತಂಝೀಮ್‌ನಲ್ಲಿ ಪ್ರಾತಿನಿಧ್ಯವನ್ನು ಹೊಂದಿರುತ್ತದೆ. ಹೆಚ್ಚು ಸದಸ್ಯರನ್ನು ಹೊಂದಿರುವ ಮಸೀದಿಗಳು ಒಂದಕ್ಕಿಂತ ಹೆಚ್ಚು ಪ್ರಾತಿನಿಧ್ಯವನ್ನು ಹೊಂದಿರುತ್ತದೆ ಎಂದು ಪತ್ರಕರ್ತ ಮತ್ತು ಸಾಮಾಜಿಕ ಕಾರ್ಯಕರ್ತ ಇನಾಯತುಲ್ಲಾ ಗವಾಯಿ ವಿವರಿಸಿದರು.

ಏತನ್ಮಧ್ಯೆ, ಮುಸ್ಲಿಂ ಅಭ್ಯರ್ಥಿಯನ್ನು ಬೆಂಬಲಿಸದಿರುವ ನಿರ್ಧಾರವನ್ನು ವಿರೋಧಿಸಿ ಭಟ್ಕಳದಲ್ಲಿ ಮಹಿಳೆಯರು ಬುಧವಾರ ತಂಝೀಮ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ತಂಝೀಮ್ ತನ್ನ ನಿರ್ಧಾರವನ್ನು ಬದಲಾಯಿಸದಿದ್ದರೆ ಚುನಾವಣೆಯಲ್ಲಿ ನೋಟಾ ಆಯ್ಕೆ ಮಾಡುತ್ತೇವೆ ಎಂದು ಮಹಿಳೆಯರು ಹೇಳಿದ್ದಾರೆ. ತಂಝೀಮ್ ಇಂತಹ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಮಹಿಳೆಯರು ಘೋಷಣಾ ವಾಕ್ಯಗಳನ್ನು ಕೂಗಿದ್ದಾರೆ. ಅಲ್ಲದೆ, ನಿರ್ಣಯ ಹಿಂಪಡೆಯುವಂತೆ ತಂಝೀಮ್ ಸಂಸ್ಥೆಗೆ ಮನವಿ ಪತ್ರವನ್ನೂ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com